ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರಿಷ್ಠ ಮತದಾನಕ್ಕಾಗಿ ಅವಧಿ ವಿಸ್ತರಣೆ

Last Updated 6 ಏಪ್ರಿಲ್ 2014, 11:17 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್ಎಸ್) : ಎಲ್ಲರ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆ ಸೋಮವಾರದಿಂದ ಆರಂಭವಾಗಲಿದ್ದು, ಗರಿಷ್ಠ ಮತದಾನಕ್ಕಾಗಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ಮತದಾನದ ಅವಧಿಯನ್ನು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ವಿಸ್ತರಿಸಿದೆ.

ಆದರೆ, ಈಶಾನ್ಯ ಭಾಗದಲ್ಲಿ ಎಂದಿನಂತೆ ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಭದ್ರತೆ ದೃಷ್ಟಿಯಿಂದ ಮಣಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬೆಳಿಗ್ಗೆ 7ರಿಂದ 5ರವರೆಗೆ, ಜಾರ್ಖಂಡ್‌ನ ನಕ್ಸಲ್ ಪೀಡಿತ ಕ್ಷೇತ್ರಗಳಾದ ರಾಜ್‌ಮಹಲ್, ಗೊಡ್ಡ ಮತ್ತು ಧನ್‌ಬಾದ್ ನಲ್ಲಿ ಬೆಳಿಗ್ಗೆ 7ರಿಂದ ಸಂಜೆ 4ರವರೆಗೆ ಮತದಾನ ನಡೆಸಲು ಆಯೋಗ ನಿರ್ಧರಿಸಿದೆ.

ಒಂಬತ್ತು ಹಂತದ ಲೋಕಸಭೆ ಚುನಾವಣೆ ಸೋಮವಾರ ಆರಂಭವಾಗಿ ಮೇ 12ರಂದು ಮುಕ್ತಾಯವಾಗಲಿದೆ. ಮೇ 16ರಂದು ಮತ ಎಣಿಕೆ ನಡೆಯಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT