ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಶಿಕ್ಷಣ ನೀಡಲು ಸಲಹೆ

ನಂಜೇದೇವನಪುರದಲ್ಲಿ ರಾಜೀವ್‌ಗಾಂಧಿ ಸೇವಾ ಕೇಂದ್ರ, ಕನಕ ಭವನ ಉದ್ಘಾಟನೆ
Last Updated 28 ಜೂನ್ 2016, 10:55 IST
ಅಕ್ಷರ ಗಾತ್ರ

ಚಾಮರಾಜನಗರ: ‘ಸರ್ಕಾರಿ ಶಾಲೆಯ ಮಕ್ಕಳು ಉತ್ತಮ ಅಂಕ ಪಡೆದು ಉತ್ತೀರ್ಣರಾಗಬೇಕು. ಈ  ನಿಟ್ಟಿನಲ್ಲಿ ಗುಣಮಟ್ಟದ ಬೋಧನೆಗೆ ಶಿಕ್ಷಕರು ಒತ್ತು ನೀಡಬೇಕಿದೆ’ ಎಂದು ಸಂಸದ ಆರ್. ಧ್ರುವನಾರಾಯಣ ಸಲಹೆ ನೀಡಿದರು.

ತಾಲ್ಲೂಕಿನ ನಂಜೇದೇವನಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ನಿರ್ಮಿಸಿರುವ ನೂತನ ಕೊಠಡಿಗಳ ಉದ್ಘಾಟನೆ, ರಾಜೀವ್‌ ಗಾಂಧಿ ಸೇವಾ ಕೇಂದ್ರ ಹಾಗೂ ಕನಕ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶೈಕ್ಷಣಿಕ ಪ್ರಗತಿಗೆ ಸರ್ಕಾರ ಹಲವು ಯೋಜನೆ ರೂಪಿಸಿದೆ. ಸರ್ಕಾರಿ ಶಾಲೆಗಳಿಗೆ ರಾಷ್ಟ್ರಿಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಕೊಠಡಿ ನಿರ್ಮಿಸಿಕೊಡಲಾಗುತ್ತಿದೆ ಎಂದರು.

ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ತರಲು ಆಸಕ್ತಿವಹಿಸಬೇಕು. ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು.

ಹಿಂದಿನ ವರ್ಷ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯು 11 ಸ್ಥಾನ ಪಡೆದಿತ್ತು. ಈ ಬಾರಿ 27ನೇ ಸ್ಥಾನಕ್ಕೆ ಕುಸಿದಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಸರ್ಕಾರಿ ಶಾಲೆಗಳಿಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದರು.

₹ 16 ಲಕ್ಷ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲಾಗಿದೆ. ಜಿಲ್ಲೆಯಲ್ಲಿ 37 ರಾಜೀವ್‌ಗಾಂಧಿ ಸೇವಾ ಕೇಂದ್ರಗಳ ನಿರ್ಮಾಣ ಪ್ರಗತಿಯಲ್ಲಿದೆ. ಇನ್ನು 25 ಕೇಂದ್ರಗಳಿಗೆ ಸ್ಥಳ ಪರಿಶೀಲನೆ ನಡೆದಿದೆ ಎಂದು ವಿವರಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಸಂಸದೀಯ ಕಾರ್ಯದರ್ಶಿ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಶಾಲೆಯಲ್ಲಿ ಹೈಟೆಕ್ ಶೌಚಾಲಯ ಹಾಗೂ ಕಂಪ್ಯೂಟರ್ ಘಟಕ ಸ್ಥಾಪಿಸಲು ಕ್ರಮವಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ, ಉಪಾಧ್ಯಕ್ಷ ಎಸ್. ಬಸವರಾಜು, ಸದಸ್ಯರಾದ ಚಂದ್ರಕಲಾ, ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ನಗರಸಭೆ ಅಧ್ಯಕ್ಷೆ ಎಸ್.ಎನ್. ರೇಣುಕಾ, ರಾಜೇಂದ್ರ ಸ್ವಾಮೀಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಮಲ್ಲಪ್ಪ, ಉಪಾಧ್ಯಕ್ಷೆ ನೀಲಮ್ಮ, ಸದಸ್ಯರಾದ ಮಹೇಶ್, ಸ್ವಾಮಿ, ಮುಖಂಡರಾದ ಪಿ. ಮರಿಸ್ವಾಮಿ, ಪಿ. ಗುರುಮಲ್ಲಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಪಾಪಣ್ಣ, ಮುಖ್ಯಶಿಕ್ಷಕ ಶಿವರಾಜು ಸೇರಿದಂತೆ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT