ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿ – ಗಣೇಶ ಹಬ್ಬ: ಬಿಗಿ ಬಂದೋಬಸ್ತ್‌

Last Updated 27 ಆಗಸ್ಟ್ 2014, 19:37 IST
ಅಕ್ಷರ ಗಾತ್ರ

ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರ­ದೆಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರ­ರೊಂದಿಗೆ ಮಾತನಾಡಿದ ಅವರು, ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ಠಾಣೆ ವ್ಯಾಪ್ತಿಯಲ್ಲಿ ನಾಗರಿಕರೊಂದಿಗೆ ಶಾಂತಿ ಸಭೆ ನಡೆಸಲಾಗಿದೆ ಎಂದರು.

ಸೂಕ್ಷ್ಮ ಪ್ರದೇಶಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲದೇ, ಅಂತಹ ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸ­ಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಪಟ್ಟಂತೆ ಈಗಾ­ಗಲೇ ಕೆಲ ಸೂಚನೆಗಳನ್ನು ನೀಡಲಾಗಿದೆ. ಬಲವಂತವಾಗಿ ಚಂದಾ ವಸೂಲಿ ಮಾಡುವವರು ಮತ್ತು ವಾಹನ ಸಂಚಾರಕ್ಕೆ ಅಡ್ಡಿಪಡಿಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾ­ಗುತ್ತದೆ ಎಂದು ರೆಡ್ಡಿ ಹೇಳಿದರು.

ಬೆಸ್ಕಾಂ ಮನವಿ: ‘ಗಣೇಶ ಹಬ್ಬದ ಸಂದರ್ಭದಲ್ಲಿ ಸಂಘ ಸಂಸ್ಥೆಗಳಿಗೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ನೀಡಲಾಗುವುದು. ಸಂಘ ಸಂಸ್ಥೆಗಳು  ಅನಧಿಕೃತ ವಿದ್ಯುತ್‌ ಸಂಪರ್ಕ ಪಡೆಯಬಾರದು’ ಎಂದು ಬೆಸ್ಕಾಂ ವಿನಂತಿಸಿದೆ. ‘ಈ ಹಿಂದೆ ಕೆಲವು ಸ್ಥಳಗ­ಳಲ್ಲಿ ಬೀದಿದೀಪದ ಕಂಬದಿಂದ ಅನಧಿ­ಕೃತ ವಿದ್ಯುತ್‌ ಸಂಪರ್ಕ ಪಡೆದಿರು­ವುದು ಗಮನಕ್ಕೆ ಬಂದಿದೆ. ಅನಧಿಕೃತ ಸಂಪ­ರ್ಕದ ಬಗ್ಗೆ ಸಾರ್ವಜನಿಕರು ಕಂಪೆನಿಯ ಸಹಾಯವಾಣಿ 1912ಕ್ಕೆ ಮಾಹಿತಿ ನೀಡಬೇಕು’ ಎಂದು  ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT