ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ, ಜಪಾನ್‌ನಲ್ಲಿ ಪ್ರಭಲ ಭೂಕಂಪ

Last Updated 23 ನವೆಂಬರ್ 2014, 8:45 IST
ಅಕ್ಷರ ಗಾತ್ರ

ಬೀಜಿಂಗ್‌ (ಪಿಟಿಐ): ನೈರುತ್ಯ ಚೀನಾದ ಸಿಯಾಚಿನ್‌ ಪ್ರಾಂತ್ಯದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಪ್ರಭಲ ಭೂಕಂಪದಲ್ಲಿ ನಾಲ್ವರು ಮೃತಪಟ್ಟು 80 ಸಾವಿರಕ್ಕೂ ಹೆಚ್ಚು ಮಂದಿ ತೊಂದರೆಗೆ ಸಿಲುಕಿದ್ದಾರೆ. 25 ಸಾವಿರಕ್ಕೂ ಹೆಚ್ಚು ಮನೆಗಳು ನೆಲಕ್ಕಚ್ಚಿವೆ. 6,200 ಮಂದಿಯನ್ನು ಸ್ಥಳಾಂತರಿಸಲಾಗಿದೆ.

ರಿಕ್ಟರ್‌ ಮಾಪಕದಲ್ಲಿ 6.3ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ. ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಅವಶೇಷಗಳಡಿ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ 54 ಮಂದಿಯನ್ನು ರಕ್ಷಿಸಲಾಗಿದೆ. ಸಾವು ನೋವು ಇನ್ನೂ ಹೆಚ್ಚುವ ಸಾಧ್ಯತೆಗಳಿವೆ ಎಂದು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ ಹೇಳಿದ್ದಾರೆ.

‘ತುರ್ತು ನೆರವಿಗೆ ಬೇಕಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ’ ಎಂದು ‘ಫಿಜಿ’ ಪ್ರವಾಸದಲ್ಲಿರುವ ಚೀನಾ ಪ್ರಧಾನಿ ಕ್ಸಿ ಜಿನ್‌ಪಿಂಗ್‌ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.

2008ರ ಮೇ 12ರಂದು ಚೀನಾದ ವೆಂಚೊನ್‌ ಪ್ರಾಂತ್ಯದಲ್ಲಿ ಸಂಭವಿಸಿದ 8.0 ತೀವ್ರತೆಯ ಭೂಕಂಪದಲ್ಲಿ 80 ಸಾವಿರ ಮಂದಿ ಮೃತಪಟ್ಟಿದ್ದರು. 2013ರ ಏಪ್ರಿಲ್‌ನಲ್ಲಿ ಲೂಸಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 196 ಮಂದಿ ಮೃತಪಟ್ಟಿದ್ದರು.

ಜಪಾನ್‌ನಲ್ಲೂ ಭೂಕಂಪ
ಟೊಕಿಯೊ (ಪಿಟಿಐ);
2008ರ ಚಳಿಗಾಲದ ಒಲಿಂಪಿಕ್ಸ್‌ ನಡೆದಿದ್ದ ಸೆಂಟ್ರಲ್‌ ಜಪಾನ್‌ನಲ್ಲಿ ಶನಿವಾರ ರಾತ್ರಿ  10 ಗಂಟೆ ಸುಮಾರಿಗೆ 6.7ರಷ್ಟು ತೀವ್ರತೆಯ ಭೂಕಂಪ ದಾಖಲಾಗಿದೆ. ಘಟನೆಯಲ್ಲಿ 37 ಮನೆಗಳು ನೆಲಕ್ಕಚ್ಚಿದ್ದು, 39 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT