ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ನಾಗರಿಕರಿಗೆ ಶೀಘ್ರ ಇ–ಪ್ರವಾಸೋದ್ಯಮ ವೀಸಾ?

Last Updated 19 ಏಪ್ರಿಲ್ 2015, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶಿತ ಚೀನಾ ಭೇಟಿಗೆ ಪೂರಕವಾಗಿ ಆ ದೇಶದ ನಾಗರಿಕರಿಗೆ ಇ – ಪ್ರವಾಸೋದ್ಯಮ ವೀಸಾ ಸೌಲಭ್ಯವನ್ನು ವಿಸ್ತರಿಸುವ ಸಾಧ್ಯತೆ ಇದೆ.

ವೀಸಾ ವಿಸ್ತರಣೆಗೆ ಗುಪ್ತಚರ ಇಲಾಖೆ ವಿರೋಧ ವ್ಯಕ್ತಪಡಿಸಿದ್ದು, ಕೇಂದ್ರ ಗೃಹ ಕಾರ್ಯದರ್ಶಿ ಎಲ್‌.ಸಿ.ಗೋಯಲ್‌ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಇದರ ಸಾಧಕ – ಬಾಧಕಗಳ ಬಗ್ಗೆ ಚರ್ಚೆ ನಡೆಸಿದ ನಂತರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ.

ಚೀನಾ ಜೊತೆಗೆ ಫ್ರಾನ್ಸ್‌, ಸ್ಪೇನ್‌, ಇಟಲಿ ಹಾಗೂ ಬ್ರಿಟನ್‌ ರಾಷ್ಟ್ರಗಳಿಗೆ ಇ – ವೀಸಾ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಪ್ರವಾಸೋದ್ಯಮ ಸಚಿವಾಲಯ ಒತ್ತಡ ಹೇರಿದೆ.

ಚೀನಾದ ನಾಗರಿಕರಿಗೆ ಇ – ವೀಸಾ ಸೌಲಭ್ಯ ವಿಸ್ತರಿಸುವುದಕ್ಕೆ ಗುಪ್ತಚರ ಇಲಾಖೆ ವಿರೋಧ ವ್ಯಕ್ತಪಡಿಸಿರುವುದು ನಿಜ. ಇದರ ಹೊರತಾಗಿಯೂ ಇ – ವೀಸಾ ಸೌಲಭ್ಯ ಕಲ್ಪಿಸುವ ಸಾಧ್ಯತೆ ಇದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೋದಿ ಅವರು ಮೇ ತಿಂಗಳಲ್ಲಿ ಚೀನಾಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅದಕ್ಕೂ ಮೊದಲೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

40 ರಾಷ್ಟ್ರಗಳ ನಾಗರಿಕರಿಗೆ ಇ – ಪ್ರವಾಸೋದ್ಯಮ ವೀಸಾ ನೀಡುವ ತೀರ್ಮಾನವನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತೆಗೆದುಕೊಂಡಿದೆ. ಆದರೆ, ಈ ಪಟ್ಟಿಯಲ್ಲಿ ಚೀನಾ ಇಲ್ಲ.

ಚೀನಾದಲ್ಲಿರುವ ಭಾರತದ ರಾಯಭಾರಿ ಅಶೋಕ್‌ ಕೆ.ಕಾಂತಾ ಅವರು ಜನವರಿಯಲ್ಲಿ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ, ಇ – ವೀಸಾ ಸೌಲಭ್ಯವನ್ನು ಚೀನಾದ ನಾಗರಿಕರಿಗೂ ವಿಸ್ತರಿಸುವಂತೆ ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT