ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ನಲ್ಲಿ ಪ್ರಬಲ ಭೂಕಂಪ

Last Updated 14 ಜನವರಿ 2016, 6:49 IST
ಅಕ್ಷರ ಗಾತ್ರ

ಟೋಕಿಯೋ (ಪಿಟಿಐ): ಉತ್ತರ  ಜಪಾನ್‌ ಭಾಗದಲ್ಲಿ  ಬುಧವಾರ ತಡ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ದಾಖಲಾಗಿದ್ದು, ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. 

ಭೂಕಂಪದ ಕೇಂದ್ರ ಬಿಂದು ಹೊಕಾಯ್ಡೊ ಕರಾವಳಿ ತೀರ ಪ್ರದೇಶದ  ಸಮುದ್ರದ  50 ಕಿ.ಮೀ. ಆಳದಲ್ಲಿ ಕೇಂದ್ರಿಕೃತವಾಗಿದೆ ಎಂದು ಜಪಾನ್‌ನ ಭೂಕಂಪ ಮಾಪನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಕಾಯ್ಡೊ ಮತ್ತು ಉರಕವಾ ನಗರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗುತ್ತಿದಂತೆ ಜನರು ಮನೆಯಿಂದ ಹೊರಗೆ ಬಂದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೂ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ ಹಾಗೂ ಜಪಾನ್‌ ಸರ್ಕಾರ ಸುನಾಮಿ ಎಚ್ಚರಿಕೆಯನ್ನು ನೀಡಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT