ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯನಗರದಲ್ಲಿ ತ್ಯಾಜ್ಯದ ರಾಶಿ

Last Updated 24 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಂಬಳ ನೀಡದ ಕಾರಣ ಕಳೆದ ನಾಲ್ಕು ದಿನಗಳಿಂದ ಜಯನಗರ ಪ್ರದೇಶದಲ್ಲಿ ಪೌರಕಾರ್ಮಿಕರು ಕಸ ಎತ್ತಲು ನಿರಾಕರಿಸಿದ್ದು ರಸ್ತೆಗಳಲ್ಲಿ ತ್ಯಾಜ್ಯದ ರಾಶಿ ಬಿದ್ದಿದೆ.

ಜಯನಗರ ಭಾಗದ ಗುತ್ತಿಗೆದಾರರು ಕಳೆದ ಮೂರು ತಿಂಗಳಿಂದ ಕಾರ್ಮಿಕರಿಗೆ ಸಂಬಳ ಬಾಕಿ ಉಳಿಸಿಕೊಂಡಿದ್ದು, ಸ್ವಲ್ಪ ಮೊತ್ತವನ್ನು ಮಾತ್ರ ನೀಡಲಾಗಿದೆ ಎಂದು ದೂರಲಾಗಿದೆ. ಇದರಿಂದ ಸಿಟ್ಟಿಗೆದ್ದ ಕಾರ್ಮಿಕರು ಕಳೆದ ನಾಲ್ಕು ದಿನಗಳಿಂದಪ್ರತಿಭಟನೆ ನಡೆಸುತ್ತಿದ್ದಾರೆ.

ಜಯನಗರ ಶಾಸಕ ಬಿ.ಎನ್‌. ಜಯಕುಮಾರ್‌ ಮತ್ತು ನಿವಾಸಿಗಳ ಕಲ್ಯಾಣ ಸಂಘದ ಅಧ್ಯಕ್ಷ ಎನ್‌.ಕೇಶವ ಕುಮಾರ್‌ ಈ ಸಂಬಂಧ ಮೇಯರ್‌ ಬಿ.ಎಸ್‌. ಸತ್ಯನಾರಾಯಣ ಅವರಿಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT