ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ ವಿಚಾರಣೆಗೆ ಸುಪ್ರೀಂಕೋರ್ಟ್‌ ತಡೆ

Last Updated 26 ಮೇ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯ­ಮಂತ್ರಿ ಜೆ. ಜಯಲಲಿತಾ ಅವರ ವಿರುದ್ಧ ಬೆಂಗಳೂರಿನ  ನ್ಯಾಯಾಲ­ಯ­ದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂ­ಕೋರ್ಟ್ 10 ದಿನಗಳ ಕಾಲ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಆದರೆ, ಜಯಲಿಲಿತಾ ಅವರ ಮೇಲಿನ ಸಿವಿಲ್‌ ಪ್ರಕರಣಗಳ ವಿಚಾರಣೆ ನಡೆಯ­ಲಿದೆ ಎಂದು ಪ್ರಕರಣದ ವಿಚಾರಣಾ ಪೀಠದ ನ್ಯಾಯಮೂರ್ತಿಗಳಾದ ಬಿ.ಎಸ್‌. ಚೌಹಾಣ್‌ ಮತ್ತು ಎ.ಕೆ.ಸಿಕ್ರಿ ಹೇಳಿದ್ದಾರೆ. ಕ್ರಿಮಿನಲ್‌ ಪ್ರಕರಣದ ವಿಚಾರಣೆಗಾಗಿ  10 ದಿನಗಳ ಕಾಲ ತಾತ್ಕಾಲಿಕ ತಡೆ­ಯಾಜ್ಞೆ ನೀಡಲಾಗಿದೆ.

ಆದರೆ, ಇತರ ಸಿವಿಲ್ ಪ್ರಕರಣಗಳ ವಿಚಾರಣೆ ಎಂದಿ­ನಂತೆ ನಡೆಯಲಿದೆ. ಅಕ್ರಮ ಆಸ್ತಿ ಪ್ರಕರ­ಣದ ವಿಚಾರಣೆ ಜೂನ್ 6ರಿಂದ ಆರಂಭ­ವಾಗಲಿದೆ ಎಂದು  ಪೀಠ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT