ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಾ ಅಕ್ರಮ ಆಸ್ತಿ ವಿಚಾರಣೆಗೆ ಸುಪ್ರೀಂ ತಡೆ

Last Updated 17 ಜೂನ್ 2014, 10:55 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬೆಂಗಳೂರಿನಲ್ಲಿ ನಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ ಹತ್ತು ದಿನಗಳ ಕಾಲ ತಡೆ ನೀಡಿದೆ.

ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಗೆ ತಡೆ ನೀಡಿದ ನ್ಯಾಯಮೂರ್ತಿಗಳಾದ ಬಿ.ಎಸ್‌.ಚೌಹಾಣ್‌ ಹಾಗೂ ಎ.ಕೆ.ಸಿಕ್ರಿ ಅವರನ್ನು ಒಳಗೊಂಡ ಪೀಠ,  ವಿಚಾರಣಾ ನ್ಯಾಯಾಲಯದಲ್ಲಿರುವ ಸಿವಿಲ್‌ ಪ್ರಕರಣಗಳ ವಿಚಾರಣೆ ಮುಂದುವರಿಯಲಿದೆ ಎಂದು ಹೇಳಿತು.

‘ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯನ್ನು ನಾವು 10 ದಿನ ನಿಲಂಬನೆಯಲ್ಲಿ ಇಡುತ್ತಿದ್ದೇವೆ. ಆದರೆ ಸಿವಿಲ್‌ ಪ್ರಕರಣಗಳ ವಿಚಾರಣೆ ಮುಂದುವರಿಯಲಿದೆ ಎಂದು ಸ್ಪಷ್ಟ ಪಡಿಸುತ್ತೇವೆ’ ಎಂದು ಹೇಳಿದ ಪೀಠ ಮುಂದಿನ ವಿಚಾರಣೆಯನ್ನು ಜೂನ್‌ 6ಕ್ಕೆ ನಿಗದಿ ಪಡಿಸಿತು.

ಜಯಲಲಿತಾ ಅವರಿಗೆ ಸೇರಿದ ಅಕ್ರಮ ಆಸ್ತಿ ಎನ್ನಲಾದ ಕೆಲವು ಸ್ವತ್ತುಗಳು ತಮಗೆ ಸೇರಿದವು ಎಂದು ಹಲವು ಕಂಪೆನಿಗಳು ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದ ಸಿವಿಲ್‌ ಪ್ರಕರಣಗಳು ನ್ಯಾಯಾಲಯದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT