ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ–ಧರ್ಮಗಳ ನಡುವಿನ ವೈಷಮ್ಯ ಮರೆಯಾಗಬೇಕು

Last Updated 1 ಆಗಸ್ಟ್ 2015, 20:20 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜಕಾರಣಿಗಳು  ತಮ್ಮ ರಾಜಕೀಯ ಲಾಭಕ್ಕಾಗಿ ಜಾತಿ–ಜಾತಿಗಳ ನಡುವೆ, ಧರ್ಮ–ಧರ್ಮಗಳ ನಡುವೆ ವೈಷಮ್ಯ ಹುಟ್ಟುಹಾಕಿದ್ದಾರೆ’ ಎಂದು ಕೇಂದ್ರ ಸರ್ಕಾರದ ನಿವೃತ್ತ  ಅಧಿಕಾರಿ ಪಿ.ಸಿ.ಚಡಗ ಅವರು  ಹೇಳಿದರು.

ಕುರಾನ್‌ ಸ್ಟಡಿ ಸರ್ಕಲ್ ಮತ್ತು ಆರ್.ಟಿ.ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

‘ಎಲ್ಲ ಧರ್ಮಗಳ ಸಾರವೂ ಒಂದೆ ಆಗಿದೆ. ಹೀಗಾಗಿ ಎಲ್ಲ ಧರ್ಮಗಳನ್ನು ಗೌರವಿಸಬೇಕು. ಜಾತಿ, ಧರ್ಮಗಳ ನಡುವಿನ ವೈಷಮ್ಯ ಮರೆಯಾಗಬೇಕು. ನಾವೆಲ್ಲಾ ಭಾರತೀಯರು ಎಂಬ ಭಾವನೆ ಬರಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ’ ಎಂದರು.

ವೈದ್ಯೆ ತಹಾ ಮತೀನ ಮಾತನಾಡಿ, ‘ಸಮಾಜದಲ್ಲಿ ಹೆಣ್ಣು ಗಂಡಿನ ನಡುವೆ ತಾರತಮ್ಯ ಹೆಚ್ಚುತ್ತಿದೆ. ಮಹಿಳೆ ಸಹ ಎಲ್ಲ ಕ್ಷೇತ್ರಗಳಲ್ಲಿಯೂ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಹೀಗಾಗಿ ಈ ತಾರತಮ್ಯ ನಿವಾರಣೆಯಾಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT