ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಪ್ರಮಾಣ ಪತ್ರ ಕಡ್ಡಾಯ: ಡಿಸಿ

Last Updated 5 ಸೆಪ್ಟೆಂಬರ್ 2015, 5:06 IST
ಅಕ್ಷರ ಗಾತ್ರ

ಉಡುಪಿ: ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾಗಿರುವ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯಿರಿ. ಪ್ರಮಾಣ ಪತ್ರದಲ್ಲಿ ಗೊಂದಲ ಇದ್ದರೆ ತಹಶೀಲ್ದಾರ್‌ಗಳ ಮೂಲಕ ಪರಿಹರಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಆರ್‌. ವಿಶಾಲ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡ ಉಪ ಯೋಜನೆಯಡಿಯಲ್ಲಿ ವಿವಿಧ ಇಲಾಖೆಗಳಿಗೆ ನಿಗದಿಪಡಿಸಿರುವ ಅನುದಾನ ಬಳಕೆ ಕುರಿತ ಸಭೆಯಲ್ಲಿ  ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನದ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ.

ಈ ಅನುದಾನವನ್ನು ಅದೇ ಸಮುದಾಯದ ಏಳಿಗೆಗೆ ಮಾತ್ರ ಬಳಸಿ. ಅನುದಾನವನ್ನು ಯಾವುದೇ ಕಾರಣಕ್ಕೂ ಬಾಕಿ ಇಡಬೇಡಿ. ಲಭ್ಯ ಇರುವ ಅನುದಾನಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ. ಗ್ರಾಮ ಪಂಚಾಯಿತಿ,ತಾಲ್ಲೂಕು ಪಂಚಾಯಿತಿ, ಪುರಸಭೆ, ನಗರಸಭೆಗಳು ನಿರ್ಮಿಸುವ ಅಂಗಡಿ ಕೋಣೆಗಳ ಹಂಚಿಕೆ ಸಂದರ್ಭದಲ್ಲಿಯೂ ಮೀಸಲಾತಿ ಅನುಸರಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಂದಾಪುರ ಉಪ ವಿಭಾಗಾಧಿಕಾರಿ ಚಾರುಲತಾ ಸೋಮಲ್‌, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪ್ರೇಮನಾಥ್‌ ಉಪಸ್ಥಿತರಿದ್ದರು.

 ಪ್ರವಾಸೋದ್ಯಮ ದಿನಾಚರಣೆ: ಉಡುಪಿಯ ಪುರಭವನದಲ್ಲಿ ಸೆಪ್ಟೆಂಬರ್‌ 27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುವುದು ಎಂದು ವಿಶಾಲ್‌ ತಿಳಿಸಿದರು. ಶನಿವಾರ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಮಣಿಪಾಲದಿಂದ ಉಡುಪಿ ವರೆಗೆ ಬೈಕ್‌ ರ್‍ಯಾಲಿ ನಡೆಸಲಾಗುತ್ತದೆ. ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗುತ್ತದೆ. ಮಲ್ಪೆ ಕಡಲ ಕಿನಾರೆಯಲ್ಲಿ ಮರಳು ಶಿಲ್ಪ ರಚನಾ ಸ್ಪರ್ಧೆ,  ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT