ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ನಲ್ಲಿ ಬಿಜೆಪಿ ಜಯಭೇರಿ: ಜಮ್ಮು ಕಾಶ್ಮೀರ ಅತಂತ್ರ

Last Updated 23 ಡಿಸೆಂಬರ್ 2014, 14:15 IST
ಅಕ್ಷರ ಗಾತ್ರ

ಜಾರ್ಖಂಡ್‌/ಶ್ರೀನಗರ/ರಾಂಚಿ (ಪಿಟಿಐ):  ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್‌ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಸಂಜೆಯ ವೇಳೆಗೆ ಪೂರ್ಣಗೊಂಡಿದೆ. ಜಾರ್ಖಂಡ್‌ನಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ.

ಜಾರ್ಖಂಡ್‌ನ 81 ಸದಸ್ಯ ಬಲದ ವಿಧಾನಸಭೆಗೆ ನಡೆದ ಸ್ಪರ್ಧೆಯಲ್ಲಿ ಬಿಜೆಪಿ 42ರಲ್ಲಿ  ಗೆಲುವು ಕಾಣುವ ಮೂಲಕ ಸ್ಪಷ್ಟ ಬಹುಮತ ಗಳಿಸಿಕೊಂಡಿದೆ. ಸರ್ಕಾರ ರಚಿಸುವುದು ಖಚಿತವಾಗಿದೆ. ಅಧಿಕಾರ ಉಳಿಸಿಕೊಳ್ಳಲು ಶತಪ್ರಯತ್ನ ನಡೆಸಿದ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) 19 ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿದೆ. ಕಾಂಗ್ರೆಸ್‌ 6 ಮತ್ತು ಜೆವಿಎಂ 8 ಸ್ಥಾನಗಳನ್ನು ಗೆದ್ದುಕೊಂಡಿವೆ. 111 ಮಹಿಳೆಯರು ಸೇರಿ ಒಟ್ಟು 1,136 ಅಬ್ಯರ್ಥಿಗಳು ಸ್ಪರ್ಧಿಸಿದ್ದರು. ಶೆ 66ರಷ್ಟು ಮತದಾನ ಆಗಿತ್ತು.

ಜಮ್ಮು ಮತ್ತು ಕಾಶ್ಮೀರ ಅತಂತ್ರ
ಜಮ್ಮು ಮತ್ತು ಕಾಶ್ಮೀರದಲ್ಲಿ ಯಾರಿಗೂ ಸ್ಪಷ್ಟ ಬಹುಮತ ಲಭಿಸದೆ ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ.  ಪಿಡಿಪಿ 28 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದು, ಎರಡನೆಯ ಸ್ಥಾನಕ್ಕೆ ಏರುವಲ್ಲಿ ಯಶಸ್ವಿಯಾಗಿದೆ. ಆಡಳಿತಾರೂಢ ನ್ಯಾಷನಲ್‌ ಕಾನ್ಫರೆನ್ಸ್‌  ಪಕ್ಷ ಮೂರನೆಯ ಸ್ಥಾನಕ್ಕೆ ಕುಸಿದಿದ್ದು ಕೇವಲ 15 ಸ್ಥಾನಗಳನ್ನು ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದೆ. ಕಣಿವೆ ರಾಜ್ಯದಲ್ಲಿ ಕಳಪೆ ಪ್ರದರ್ಶನ ತೋರಿರುವ ಕಾಂಗ್ರೆಸ್‌ ಪ್ರಯಾಸದಿಂದ 12 ಸ್ಥಾನಗಳನ್ನು ಗೆದ್ದು ನಾಲ್ಕನೆಯ ಸ್ಥಾನಕ್ಕೆ ಕುಸಿದಿದೆ. 

ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಮತ್ತು ಪ್ರಮುಖ ವಿರೋಧ ಪಕ್ಷ ಪಿಡಿಪಿಯ ಮುಖ್ಯಮಂತ್ರಿ ಅಬ್ಯರ್ಥಿ ಮುಫ್ತಿ ಮೊಹಮ್ಮದ್‌ ಸಯೀದ್‌ ಸೇರಿ ಒಟ್ಟು 821 ಅಬ್ಯರ್ಥಿಗಳು ಕಣದಲ್ಲಿದ್ದರು. ಈ ರಾಜ್ಯದಲ್ಲಿ 87 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ದಾಖಲೆ ಮತದಾನ ಆಗಿತ್ತು.

ಕಾಶ್ಮೀರದಲ್ಲಿ ಸರ್ಕಾರ ರಚನೆಗಾಗಿ ಎಲ್ಲ ಆಯ್ಕೆಗಳು ಮುಕ್ತ ಎಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಹೇಳಿದ್ದಾರೆ.

ಕ್ಷಣಕ್ಷಣದ ಮಾಹಿತಿಗೆ: http://eciresults.nic.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT