ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌, ಕಾಶ್ಮೀರದಲ್ಲಿ ಶಾಂತಿಯುತ ಮತದಾನ

Last Updated 25 ನವೆಂಬರ್ 2014, 10:15 IST
ಅಕ್ಷರ ಗಾತ್ರ

ರಾಂಚಿ/ ಶ್ರೀನಗರ: ಜಾರ್ಖಂಡ್‌ ಮತ್ತು ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮಂಗಳವಾರ ಶಾಂತಿಯುತವಾಗಿ ನಡೆಯುತ್ತಿರುವ ಬಗ್ಗೆ ವರದಿಯಾಗಿದೆ.

ಮಧ್ಯಾಹ್ನದ ವೇಳೆಗೆ ಜಾರ್ಖಂಡ್‌ನಲ್ಲಿ ಶೇ 36ರಷ್ಟು ಹಾಗೂ ಜಮ್ಮು ಕಾಶ್ಮೀರದಲ್ಲಿ ಶೇ 33ರಷ್ಟು ಮತದಾನವಾದ ಬಗ್ಗೆ ವರದಿಯಾಗಿದೆ.
ಕಾಶ್ಮೀರದಲ್ಲಿ ಉಗ್ರರು ಮತ್ತು ಜಾರ್ಖಂಡ್‌ನಲ್ಲಿ ನಕ್ಸಲರ ಬೆದರಿಕೆ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಂದೋಬಸ್ತ್‌  ಮಾಡಲಾಗಿದೆ. ಇಲ್ಲಿಯವರೆಗೂ ಯಾವುದೇ ಅಹಿತಕರ ಘಟನೆಗಳು ಜರುಗಿದ ಬಗ್ಗೆ ವರದಿಯಾಗಿಲ್ಲ.

ಕಾಶ್ಮೀರದ 15 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರಗಳಲ್ಲಿ 125 ಅಭ್ಯರ್ಥಿಗಳ ಹಣೆ ಬರಹ ಮತಪೆಟ್ಟಿಗೆಯಲ್ಲಿ ದಾಖಲಾಗಲಿದೆ. ಜಮ್ಮುವಿನ ಆರು, ಕಾಶ್ಮೀರ ವಲಯದ ಐದು ಹಾಗೂ ಲಡಾಖ್‌ ಪ್ರಾಂತ್ಯದ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ.

ನಕ್ಸಲರ ಬೆದರಿಕೆ ನಡುವೆಯು ಜಾರ್ಖಂಡ್‌ನಲ್ಲಿ ಶಾಂತಿಯುತ ಮತದಾನ ನಡೆಯುತ್ತಿದೆ. ಇಲ್ಲಿನ 13 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT