ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ ಚಹಾ ಚರ್ಚೆ: ರಾಹುಲ್ ಲೇವಡಿ

Last Updated 27 ನವೆಂಬರ್ 2015, 11:08 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಜಾರಿಗೆ ಸಂಬಂಧಿಸಿದಂತೆ ‘ಸಾರ್ವಜನಿಕ ಒತ್ತಡ’ ಹೆಚ್ಚಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಅವರನ್ನು ಚಹಾ ಕೂಟ-ಚರ್ಚೆಗೆ ಆಹ್ವಾನಿಸಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಸಂಸತ್ತಿನ ಹೊರಗೆ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ರಾಹುಲ್, ಜಿಎಸ್‌ಟಿ ಜಾರಿಗೆ ಮನವೊಲಿಸಲು ಚಹಾ ಕೂಟ ಮಾರ್ಗವನ್ನು ಅನುಸರಿಸಿರುವುದು ಸರಿಯಾದ ಕ್ರಮವಲ್ಲ ಎಂದು ಲೇವಡಿ ಮಾಡಿದ್ದಾರೆ. 

ಮೋದಿ ಅವರು ದೆಹಲಿಯ ರೇಸ್ ಕೋರ್ಸ್ ರಸ್ತೆಯಲ್ಲಿನ ತಮ್ಮ ನಿವಾಸದಲ್ಲಿ ಇಂದು (ಶುಕ್ರವಾರ) ಸಂಜೆ 7ಕ್ಕೆ ಚಹಾ ಕೂಟಕ್ಕೆ ಆಗಮಿಸುವಂತೆ ಸೋನಿಯಾ ಹಾಗೂ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT