ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪಂ.ಕಣದಲ್ಲಿ 79 ಅಭ್ಯರ್ಥಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಪಂ, ತಾಪಂ ಚುನಾವಣೆ
Last Updated 10 ಫೆಬ್ರುವರಿ 2016, 10:47 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ 21 ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳಿಗೆ ಒಟ್ಟು 79 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.  ಇದೇ ರೀತಿ 77 ತಾಲ್ಲೂಕು ಪಂಚಾಯ್ತಿ ಕ್ಷೇತ್ರಗಳಿದ್ದು, ಒಟ್ಟು 224 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

ಜಿಲ್ಲಾ ಪಂಚಾಯ್ತಿಯ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಜೆಡಿಎಸ್‌ನ ಅಭ್ಯರ್ಥಿಗಳು 17, ಬಿಎಸ್ಪಿಯ ಇಬ್ಬರು, 18 ಪಕ್ಷೇತರರು ಕಣದಲ್ಲಿದ್ದಾರೆ.

ತಾಲ್ಲೂಕು ಪಂಚಾಯ್ತಿಯ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಬಿಜೆಪಿ 74, ಜೆಡಿಎಸ್‌ 56, ಬಿಎಸ್ಪಿ 1 ಕ್ಷೇತ್ರದಲ್ಲಿ ಸ್ಪರ್ಧಿಸಿದೆ. 15 ಕಡೆ ಪಕ್ಷೇತರರು ಸ್ಪರ್ಧಿಸಿದ್ದಾರೆ.

246 ಅತಿಸೂಕ್ಷ್ಮ ಮತಗಟ್ಟೆ: ಜಿಲ್ಲೆಯಲ್ಲಿ 2,94,265 ಪುರುಷರು, ಮಹಿಳೆಯರು ಸೇರಿದಂತೆ ಒಟ್ಟು 5,81,603 ಮತದಾರರು ಹಕ್ಕು ಚಲಾಯಿಸಲಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 816 ಮತದಾನ ಕೇಂದ್ರಗಳಿದ್ದು, ಇದರಲ್ಲಿ 246 ಅತಿಸೂಕ್ಷ್ಮ, 312 ಸೂಕ್ಷ್ಮ ಹಾಗೂ 258 ಸಾಮಾನ್ಯ ಮತಗಟ್ಟೆಗಳಿವೆ.

ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಪ್ರತಿ ತಾಲ್ಲೂಕಿಗೆ ಒಬ್ಬರು ಚುನಾವಣಾಧಿಕಾರಿ ಹಾಗೂ ಒಬ್ಬರು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್. ಪಾಲಯ್ಯ ತಿಳಿಸಿದ್ದಾರೆ. 

ಚುನಾವಣಾ ವೀಕ್ಷಕರ ನೇಮಕ: ಜಿಲ್ಲೆಗೆ ಮೂವರು ಚುನಾವನಾ ವೀಕ್ಷಕರನ್ನು ನಿಯೋಜಿಸಲಾಗಿದೆ.
ವಿಶೇಷ ವೀಕ್ಷಕರನ್ನಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಚ್.ಎಸ್. ಅಶೋಕಾನಂದ ಅವರನ್ನು ನೇಮಿಸಲಾಗಿದೆ.
ಸಾಮಾನ್ಯ ವೀಕ್ಷಕರನ್ನಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕ ಅಕ್ರಂ ಪಾಷ ಅವರನ್ನು ಹಾಗೂ ವೆಚ್ಚ ವೀಕ್ಷಕರನ್ನಾಗಿ     ಬೆಂಗಳೂರು ನಗರ ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಎಸ್. ಲಾವಣ್ಯ ಅವರನ್ನು ನೇಮಿಸಲಾಗಿದೆ.

ಸಹಾಯವಾಣಿಗಳು: ಜಿಲ್ಲಾಧಿಕಾರಿಗಳ ಕಚೇರಿ 080-22868086, ದೇವನಹಳ್ಳಿ ತಾಲ್ಲೂಕು ಕಚೇರಿ-27682232, ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ –27622002, ಹೊಸಕೋಟೆ ತಾಲ್ಲೂಕು ಕಚೇರಿ -27931327, ನೆಲಮಂಗಲ ತಾಲ್ಲೂಕು ಕಚೇರಿ-27722126.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT