ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಡಳಿತಕ್ಕೆ ದಾಖಲೆ ಸಲ್ಲಿಕೆ: ಬೌರಿಂಗ್‌

Last Updated 25 ಜುಲೈ 2015, 20:27 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ಸೇಂಟ್‌ ಮಾರ್ಕ್ಸ್ ರಸ್ತೆಯಲ್ಲಿರುವ ಬೌರಿಂಗ್‌ ಇನ್‌ಸ್ಟಿಟ್ಯೂಟ್‌  ಯಾವುದೇ ನಿಯಮ ಉಲ್ಲಂಘಿಸಿಲ್ಲ. ಈ ಸಂಬಂಧ ಜಿಲ್ಲಾಡಳಿತ ಹಾಗೂ ಸದನ ಸಮಿತಿಗೆ ಅಗತ್ಯ ದಾಖಲೆಗಳನ್ನು ನೀಡಲಾಗಿದೆ’ ಎಂದು ಇನ್‌ಸ್ಟಿಟ್ಯೂಟ್‌ನ ಕಾರ್ಯದರ್ಶಿ ಎಚ್‌.ಎಸ್‌. ಶ್ರೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

‘ಸದನ ಸಮಿತಿಯು ಜುಲೈ 13ರಂದು  ಸಂಸ್ಥೆಗೆ ಭೇಟಿ ನೀಡಿತ್ತು. ಜಿಲ್ಲಾಧಿಕಾರಿ ಅವರು ಭೇಟಿ ನೀಡಿ ಪರಿಶೀಲಿಸಿದ್ದರು. ಆ ಸಂದರ್ಭದಲ್ಲಿ ಸರ್ಕಾರದ ಜತೆಗೆ ಮಾಡಿಕೊಂಡ ಒಪ್ಪಂದದ ದಾಖಲೆಗಳನ್ನು ನೀಡಲಾಗಿದೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘1956ರಲ್ಲಿ ಆಗಿನ ಮೈಸೂರು ಸರ್ಕಾರ ಬೌರಿಂಗ್‌ ಇನ್‌ಸ್ಟಿಟಿಟ್ಯೂಟ್‌ಗೆ ಕ್ಲಬ್‌ ಚಟುವಟಿಕೆಗಳಿಗಾಗಿ ವಾರ್ಷಿಕ ₹ 30ರ ಬಾಡಿಗೆ ದರದಲ್ಲಿ 51,525 ಅಡಿ ಜಮೀನನ್ನು 99 ವರ್ಷದ ಅವಧಿಗೆ ಮಂಜೂರು ಮಾಡಿತ್ತು. ಈ ಪೈಕಿ 15 ಸಾವಿರ ಅಡಿ ಜಮೀನನ್ನು 1969ರಲ್ಲಿ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ಗೆ ಗುತ್ತಿಗೆಗೆ ನೀಡಲಾಗಿದೆ. ಈ ಜಾಗಕ್ಕೆ ತೈಲ ನಿಗಮ ನೀಡುವ ಬಾಡಿಗೆಯ ಅರ್ಧದಷ್ಟನ್ನು ಸರ್ಕಾರಕ್ಕೆ ಪಾವತಿಸಬೇಕು ಎಂಬ ಷರತ್ತಿನೊಂದಿಗೆ ಗುತ್ತಿಗೆಗೆ ಒಪ್ಪಿಗೆ ನೀಡಲಾಗಿತ್ತು. ಜೂನ್‌ ಅಂತ್ಯದವರೆಗೂ ಸರ್ಕಾರದ ಬಾಡಿಗೆ ಪಾಲನ್ನು ಪಾವತಿ ಮಾಡಲಾಗಿದೆ. ಸಂವಹನ ಕೊರತೆಯಿಂದಾಗಿ ಸಿಎಜಿ ಆಕ್ಷೇಪ ವ್ಯಕ್ತಪಡಿಸಿತ್ತು’ ಎಂದು ಅವರು ಸಮಜಾಯಿಷಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT