ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಎನ್‌ಯು ಕುಲಪತಿಗೆ ದೆಹಲಿ ಪೊಲೀಸರ ಪತ್ರ

Last Updated 13 ಫೆಬ್ರುವರಿ 2016, 6:54 IST
ಅಕ್ಷರ ಗಾತ್ರ

ನವದೆಹಲಿ (ಏಜೆನ್ಸೀಸ್‌): ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರು ಮಂದಿ ವಿದ್ಯಾರ್ಥಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಕುಲಪತಿಗೆ ದೆಹಲಿ ಪೊಲೀಸರು ಪತ್ರ ಬರೆದಿದ್ದಾರೆ.

ಸಂಸತ್‌ ದಾಳಿ ಅಪರಾಧಿ ಅಫ್ಜಲ್‌ ಗುರುವನ್ನು ಗಲ್ಲಿಗೇರಿಸಿದ್ದನ್ನು ವಿರೋಧಿಸಿ ವಿಶ್ವವಿದ್ಯಾಲಯದ ಕೆಲ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿದ್ದರು.

ಕಾರ್ಯಕ್ರಮ ನಡೆಸಿದ ಆರೋಪದಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ ಎಂಬವರನ್ನು ಬಂಧಿಸಲಾಗಿದೆ. ರಾಷ್ಟ್ರದ್ರೋಹ ಮತ್ತು ಅಪರಾಧ ಒಳಸಂಚು ಆರೋಪಗಳನ್ನು ಅವರ ವಿರುದ್ಧ ಹೊರಿಸಲಾಗಿದೆ.

ಪ್ರತಿಭಟನೆ: ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ ಬಂಧನ ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT