ಬೆಂಗಳೂರು: ‘ಡಿ.12ರಿಂದ 3 ದಿನಗಳ ಕಾಲ ಅಖಿಲ ಭಾರತ 12ನೇ ಶರಣ ಸಾಹಿತ್ಯ ಸಮ್ಮೇಳನವನ್ನು ವಿಜಯಪುರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೊ.ರು. ಚನ್ನಬಸಪ್ಪ ಅವರು ತಿಳಿಸಿದರು.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಹಿರಿಯ ವಿದ್ವಾಂಸ ಮತ್ತು ಗ್ರಂಥಾಲಯದ ತಜ್ಞ ಡಾ.ಎಸ್.ಆರ್.ಗುಂಜಾಳ ಅವರು 12ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ’ ಎಂದರು.

‘ಸಮ್ಮೇಳನದ ಅಂಗವಾಗಿ ಚಿಂತನಗೋಷ್ಠಿಗಳು, ಪುಸ್ತಕ ಪ್ರದರ್ಶನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ’ ಎಂದು ಮಾಹಿತಿ ನೀಡಿದರು.

‘ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಮತ್ತಿತರ ರಾಜ್ಯಗಳಿಂದ ಶರಣ ಸಾಹಿತ್ಯ ಆಸಕ್ತರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.