ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಢಾಕಾ: ಆರು ಮಂದಿ ಉಗ್ರರ ಹತ್ಯೆ

18 ಮಂದಿ ಒತ್ತೆಯಾಳುಗಳ ರಕ್ಷಣೆ
Last Updated 2 ಜುಲೈ 2016, 6:55 IST
ಅಕ್ಷರ ಗಾತ್ರ

ಢಾಕಾ (ಏಜೆನ್ಸೀಸ್‌): ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ವಿದೇಶಿಯರು ಸೇರಿದಂತೆ ಹಲವರನ್ನು ಒತ್ತೆಯಿರಿಸಿಕೊಂಡಿದ್ದ ಆರು ಮಂದಿ ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಉಗ್ರರು ಒತ್ತೆಯಿರಿಸಿಕೊಂಡಿದ್ದ 18 ಮಂದಿಯನ್ನು ರಕ್ಷಿಸಲಾಗಿದೆ ಎಂದು ಬಾಂಗ್ಲಾದೇಶದ ಭದ್ರತಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗುಲ್ಷನ್‌ ಪ್ರದೇಶದಲ್ಲಿರುವ ಹೋಲಿ ಆರ್ಟಿಸನ್‌ ಬೇಕರಿಗೆ ಶುಕ್ರವಾರ ರಾತ್ರಿ ನುಗ್ಗಿದ್ದ ಉಗ್ರರು ಜಪಾನೀಯರು ಸೇರಿದಂತೆ ಹಲವು ವಿದೇಶಿಯರನ್ನು ಒತ್ತೆಯಿರಿಸಿಕೊಂಡಿದ್ದರು.

ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನವರೆಗೆ ಭದ್ರತಾ ಪಡೆ ನಿರಂತರ ಕಾರ್ಯಾಚರಣೆ ನಡೆಸಿತು. ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯ ಕೆಲ ಯೋಧರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT