ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞಾನ ಗರಿಷ್ಠ ಬಳಕೆ ಅಗತ್ಯ

Last Updated 13 ಫೆಬ್ರುವರಿ 2016, 5:34 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ತಂತ್ರಜ್ಞಾನದ ಬಳಕೆಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು.

ವಿದ್ಯಾ ಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನದ ಶಾಲೆಗಳ ಪ್ರಾಂಶುಪಾಲರ ಸಮಾವೇಶದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದಿಂದ ದೂರ ಇರುವುದರಿಂದ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳ ಬೆಳವಣಿಗೆ ಕುಂಠಿತವಾಗಲಿದೆ ಎಂದರು.

ಶಿಕ್ಷಾ ಸಂಸ್ಥಾನ ದೇಶದಲ್ಲಿ 12 ಸಾವಿರ ಶಾಲೆಗಳನ್ನು ನಡೆಸುತ್ತಿದ್ದು, 32 ಲಕ್ಷ ವಿದ್ಯಾರ್ಥಿಗಳು ಇಲ್ಲಿ ಸೇರಿದ್ದಾರೆ. ಶಿಕ್ಷಾ ಸಂಸ್ಥಾನದ ಸಂಖ್ಯೆ ವೃದ್ಧಿಸಿದಂತೆ  ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಗಮನ ನೀಡಬೇಕು. ಮೌಲ್ಯಯುತ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದು ಸಲಹೆ ನೀಡಿದರು.

ಜ್ಞಾನವನ್ನು ಎಲ್ಲ ದಿಕ್ಕುಗಳಿಂದಲೂ ಪಡೆಯಬೇಕು. ಜ್ಞಾನ ಪಡೆಯಲು ಮುಕ್ತ ಮನಸ್ಸು ಹೊಂದಿರಬೇಕು. 2020ರ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ತರುವ ಕ್ರೀಡಾಪಟುಗಳನ್ನು ಈಗಿನಿಂದಲೇ ಸಜ್ಜುಗೊಳಿಸಬೇಕು ಎಂದು ಪ್ರಧಾನಿ ಸಲಹೆ ನೀಡಿದರು.

ಇಂಧನ ಉಳಿತಾಯಕ್ಕೆ ಹೆಚ್ಚಿನ ಗಮನ ನೀಡಬೇಕಾಗಿದೆ. ವಿದ್ಯಾ ಭಾರತಿ ಶಿಕ್ಷಾ ಸಂಸ್ಥೆಯ 32 ಲಕ್ಷ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಆಂದೋಲನ ಕೈಗೊಳ್ಳಬೇಕು. ಸಂಸ್ಥೆಯ 12 ಸಾವಿರ ಶಾಲೆಗಳು ಎಲ್‌ಇಡಿ ಬಲ್ಬ್‌ಗಳನ್ನು ಬಳಸಿದರೆ ಅಪಾರ ಪ್ರಮಾಣದಲ್ಲಿ ಇಂಧನ ಮತ್ತು ಹಣ ಉಳಿತಾಯವಾಗಲಿದೆ ಎಂದರು.

100 ದೊಡ್ಡ ನಗರಗಳು ಎಲ್‌ಇಡಿ ಬಲ್ಬ್‌ಗಳನ್ನು ಬಳಸಿದರೆ 20 ಸಾವಿರ ಮೆಗಾವಾಟ್‌ ವಿದ್ಯುತ್‌ ಉಳಿತಾಯವಾಗಲಿದೆ. ದೇಶಭಕ್ತಿಗೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT