ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ಮಳೆ ಅಬ್ಬರ; ಜನಜೀವನ ದುಸ್ತರ

Last Updated 1 ಡಿಸೆಂಬರ್ 2015, 14:16 IST
ಅಕ್ಷರ ಗಾತ್ರ

ಚೆನ್ನೈ(ಪಿಟಿಐ): ತಮಿಳುನಾಡಿನಲ್ಲಿ ಮತ್ತೆ ವರುಣನ ಅಬ್ಬರ ಶುರುವಾಗಿದ್ದು, ಕುಂಭದ್ರೋಣ ಮಳೆಯಿಂದಾಗಿ ಚೆನ್ನೈನಲ್ಲಿ ಮಂಗಳವಾರ ರೈಲು ಹಾಗೂ ಬಸ್‌ ಸಂಚಾರಕ್ಕೆ ತೊಂದರೆಯಾಗಿದೆ.

ಈ ಬೆನ್ನಲ್ಲೆ ಪರಿಸ್ಥಿತಿ ಅವಲೋಕಿಸಿದ ಮುಖ್ಯಮಂತ್ರಿ ಜಯಲಲಿತಾ, ಮಳೆಯಿಂದ ತತ್ತರಿಸಿರುವ ಪ್ರದೇಶಗಳ ಪರಿವೀಕ್ಷಣೆಗೆ ಸಚಿವರನ್ನು ನೇಮಿಸಿದ್ದಾರೆ.

ಸನ್ನದ್ಧವಾಗಿರಲು ಸೂಚನೆ: ‘ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಪೊಲೀಸ್‌, ಅಗ್ನಿಶಾಮಕ ಮತ್ತು ರಕ್ಷಣೆ, ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ, ಕರಾವಳಿ ಪಡೆಯನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ’ ಎಂದು ಪ್ರಕಟಣೆಯಲ್ಲಿ ಜಯಲಲಿತಾ ಅವರು ತಿಳಿಸಿದ್ದಾರೆ.

ಪರೀಕ್ಷೆ ಮುಂದೂಡಲು ಸೂಚನೆ: ಇನ್ನು, ಡಿಸೆಂಬರ್ 7ರಿಂದ ನಡೆಯಬೇಕಿದ್ದ ಅರ್ಧವಾರ್ಷಿಕ ಪರೀಕ್ಷೆಗಳನ್ನು ಮಳೆಯಿಂದಾಗಿ ಮುಂದಿನ ತಿಂಗಳಿಗೆ ಮುಂದೂಡುವಂತೆಯೂ ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಈ ನಡುವೆ, ಮಳೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟವರ ಸಂಖ್ಯೆ 188ಕ್ಕೆ ಹೆಚ್ಚಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT