ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ‘ಕಾವೇರಿ’ದ ಪ್ರತಿಭಟನೆ

Last Updated 22 ನವೆಂಬರ್ 2014, 13:56 IST
ಅಕ್ಷರ ಗಾತ್ರ

ತಂಜಾವೂರ್‌ (ಪಿಟಿಐ): ಮೇಕೆದಾಟು ಬಳಿ ಕಾವೇರಿ ನದಿಗೆ ಎರಡು ಅಣೆಕಟ್ಟುಗಳನ್ನು ನಿರ್ಮಿಸಲು ಮುಂದಾಗಿರುವ ಕರ್ನಾಟಕದ ಕ್ರಮ ವಿರೋಧಿಸಿ ನೂರಾರು ರೈತರು ಮತ್ತು ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಶನಿವಾರ ಕಾವೇರಿ ನದಿ ತಟದಲ್ಲಿ  ಪ್ರತಿಭಟನೆ ನಡೆಸಿದರು.

ಶನಿವಾರ ಬೆಳಿಗ್ಗೆ ‘ಎಂಡಿಎಂಕೆ’ ನಾಯಕ ವೈಕೊ ನೇತೃತ್ವದಲ್ಲಿ ತಂಜಾವೂರಿನ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿದ ರೈತರು ಕರ್ನಾಟಕದ ವಿರುದ್ಧ ಘೋಷಣೆಗಳನ್ನು ಕೂಗಿದರು. ಭಾರಿ ಮಳೆಯಿಂದಾಗಿ ಹಳಿಗಳ ಮೇಲೆ ನೀರು  ಹರಿಯುತ್ತಿದ್ದರೂ ಇದನ್ನು ಲೆಕ್ಕಿಸದೆ ಪ್ರತಿಭಟನಾಕಾರರು ಕರ್ನಾಟಕ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

‘ಅಣೆಕಟ್ಟು  ನಿರ್ಮಾಣಕ್ಕೆ  ತಡೆ ನೀಡುವುದರಿಂದ ಸುಮಾರು  ಐದು ಕೋಟಿ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬಹುದು’ ಎಂದು ಪ್ರತಿಭಟನೆ ಬಳಿಕ ವೈಕೊ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT