ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಸ್ಟಾಲಿನ್‌ ವಿರೋಧ ಪಕ್ಷದ ನಾಯಕ

Last Updated 24 ಮೇ 2016, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಹಿರಿಯ ಮುಖಂಡ ಎಂ.ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್‌ ಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಮಂಗಳವಾರ ಆಯ್ಕೆಯಾದರು.

234 ಸ್ಥಾನಗಳ ತಮಿಳುನಾಡು ವಿಧಾನಸಭೆಯಲ್ಲಿ ಡಿಎಂಕೆ 89 ಶಾಸಕರನ್ನು ಹೊಂದಿದ್ದು, ಅತಿ ದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಹೀಗಾಗಿ ಸ್ಟಾಲಿನ್ ವಿರೋಧಪಕ್ಷದ ನಾಯಕರಾಗಲಿದ್ದಾರೆ. ಕಳೆದ ಬಾರಿಯ ವಿಧಾನಸಭೆಯಲ್ಲಿ ಡಿಎಂಕೆ ಕೇವಲ 23 ಸ್ಥಾನಗಳನ್ನು ಹೊಂದಿತ್ತು.

ವಿಜಯಕಾಂತ್‌ ನೇತೃತ್ವದ ಡಿಎಂಡಿಕೆ 29 ಸ್ಥಾನಗಳನ್ನು ಪಡೆದಿತ್ತು. ಸ್ಟಾಲಿನ್‌ 2006ರಲ್ಲಿ ಕರುಣಾನಿಧಿ ಅವರ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT