ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಹಶೀಲ್ದಾ ರ್ ನಿದ್ರಿಸುತ್ತಿದ್ದಾರೆಯೇ?

ಅಕ್ಷರ ಗಾತ್ರ

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿಯ ಜಿ. ಹೊಸಹಳ್ಳಿ ಪಂಚಾಯಿ­ತಿಗೆ ಸೇರಿದ ಮಡೇನಹಳ್ಳಿ ಗ್ರಾಮದಲ್ಲಿ  ಪುರಾತನ­ವಾದ ಎರಡು ಕೆರೆಗಳಿವೆ.

ಆದರೆ ಈ ಎರಡೂ ಕೆರೆಗಳನ್ನು ಸುಮಾರು ಅರ್ಧ ಭಾಗಕ್ಕಿಂತಲೂ ಹೆಚ್ಚು ಒತ್ತುವರಿ ಮಾಡಿಕೊಂಡು ಕೆಲವರು ಅಲ್ಲಿ ಅನೇಕ ವರ್ಷಗಳಿಂದ ಅಕ್ರಮವಾಗಿ ಅಡಿಕೆ, ತೆಂಗು, ಬಾಳೆ  ಮುಂತಾದ ವಾಣಿಜ್ಯ ಬೆಳೆಗಳನ್ನು ಬೆಳೆದು ಲಾಭ ಪಡೆಯುತ್ತಿದ್ದಾರೆ.

ಈ ಬಗ್ಗೆ ಸುಮಾರು ವರ್ಷಗಳಿಂದ ನ್ಯಾಯಾ­ಲಯದಲ್ಲಿ ವಿಚಾರಣೆ ಕೂಡ ನಡೆಯುತ್ತಿದೆ. ಅದು ಇತ್ಯರ್ಥವಾಗದೆ ಕುಂಟುತ್ತಲೂ ಸಾಗಿದೆ.
ಅದು ಏನೇ ಇರಲಿ, ರಾಜ್ಯದ ಎಲ್ಲಾ ಸರ್ಕಾರಿ ಸ್ವತ್ತುಗಳ ಒತ್ತುವರಿಗಳನ್ನು ತೆರವುಗೊಳಿಸಲು ಇತ್ತೀಚೆಗೆ ಹೈಕೋರ್ಟ್‌ನ ಆದೇಶವೇ ಆಗಿರು­ವುದು ಇಡೀ ರಾಜ್ಯದ ಜನತೆಗೆ ತಿಳಿದ ವಿಷಯ. ಅದರಂತೆ ತುಮಕೂರು ಜಿಲ್ಲೆಗೆ ಸಂಬಂಧಿಸಿದ ವಿವಿಧ ತಾಲ್ಲೂಕುಗಳಲ್ಲಿ  ಆಯಾ ತಹಶೀಲ್ದಾ­ರರ ಹಾಗೂ ಅಧಿಕಾರಿಗಳ ಸಹಭಾಗಿತ್ವದಲ್ಲಿ ಅನೇಕ ಕೆರೆಗಳ ಒತ್ತುವರಿ ತೆರವುಗೊಳಿಸು­ತ್ತಿರುವುದನ್ನು ಪ್ರತಿನಿತ್ಯ ದಿನಪತ್ರಿಕೆಗಳಲ್ಲಿ ನೋಡುತ್ತಿದ್ದೇವೆ.

ಇಷ್ಟೆಲ್ಲಾ ಆದರೂ ನಮ್ಮ ಗುಬ್ಬಿ ತಾಲ್ಲೂಕು ತಹಶೀಲ್ದಾರರು ಮಾತ್ರ ಇದುವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ತಟಸ್ಥರಾಗಿದ್ದಾರೆ. ಹಾಗಾಗಿ   ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಮಡೇನಹಳ್ಳಿ ಗ್ರಾಮದ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT