ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿಯ ಅಂತ್ಯಕ್ರಿಯೆ: ತೇಜ್ ಪಾಲ್‍ಗೆ ಮಧ್ಯಂತರ ಜಾಮೀನು

Last Updated 19 ಮೇ 2014, 10:44 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‍ಎಸ್): ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ತೆಹೆಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಅವರಿಗೆ ಕೊನೆಗೂ ಜಾಮೀನು ದೊರೆತಿದೆ. ಭಾನುವಾರ ನಿಧನರಾದ ತಾಯಿಯ ಅಂತ್ಯಸಂಸ್ಕಾರದ ವಿಧಿ ವಿಧಾನಗಳನ್ನು ಪೂರೈಸುವ ಸಲುವಾಗಿ ಸುಪ್ರೀಂಕೋರ್ಟ್ ಮೂರು ವಾರಗಳ ಮಧ್ಯಂತರ ಜಾಮೀನು ಕರುಣಿಸಿದೆ.

ತೇಜ್‍ಪಾಲ್ ತಾಯಿ ಭಾನುವಾರ ಗೋವಾದಲ್ಲಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಅವರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು. ಅರ್ಜಿ ಪುರಸ್ಕರಿಸಿದ ನ್ಯಾಯಾಧೀಶರು ಮೂರು ವಾರಗಳ ಮಧ್ಯಂತರ ಜಾಮೀನು ನೀಡಲು ಒಪ್ಪಿಗೆ ಸೂಚಿಸಿದರು.

ಸಹೊದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜ್‍ಪಾಲ್ ನವೆಂಬರ್ 30, 2013ರಂದು ಬಂಧನಕ್ಕೆ ಒಳಗಾಗಿದ್ದರು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಗೋವಾದ ವಾಸ್ಕೋ ನಗರದ ಸದಾ ಉಪಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT