ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಪು ಎತ್ತಿ ಹಿಡಿದ ದೆಹಲಿ ಹೈಕೋರ್ಟ್‌

ಚೌಟಾಲಾ ಪ್ರಕರಣ
Last Updated 5 ಮಾರ್ಚ್ 2015, 7:16 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಮತ್ತು ಅವರ ಪುತ್ರ ಅಜಯ್ ಚೌಟಾಲಾ ಅವರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 10 ವರ್ಷಗಳ ಸೆರೆವಾಸ ಶಿಕ್ಷೆಯ ತೀರ್ಪನ್ನು ದೆಹಲಿ ಹೈಕೋರ್ಟ್‌ ಗುರುವಾರ ಎತ್ತಿ ಹಿಡಿದಿದೆ.

ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಆರೋಪಿಗಳು ಫೆಬ್ರುವರಿ 7ರಂದು ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ಧಾರ್ಥ ಮೃದುಲ್‌ ಅವರು, ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದ್ದು, ವಿಚಾರಣಾ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಪ್ರಕರಣದ ಇತರೆ 50 ಮಂದಿ ಆರೋಪಿಗಳ ಶಿಕ್ಷೆಯನ್ನು ಎರಡು ವರ್ಷಕ್ಕೆ ಬದಲಾಯಿಸಿರುವ ದೆಹಲಿ ಹೈಕೋರ್ಟ್‌, ಈಗಾಗಲೇ ಎರಡು ವರ್ಷ ಜೈಲಿನಲ್ಲಿ ದಿನದೂಡಿರುವ ಆರೋಪಿಗಳನ್ನು ಬಿಡುಗಡೆಗೊಳಿಸಲು ಸೂಚಿಸಿದೆ.

ಪ್ರಕರಣದ ಇತರೆ ಮುಖ್ಯ ಆರೋಪಿಗಳಾದ ಸಂಜೀವ ಕುಮಾರ್, ವಿದ್ಯಾ ಧರ್ ಮತ್ತು ಶೇರ್ ಸಿಂಗ್ ಬಡಾಶಾಮಿ ಅವರಿಗೂ ವಿಚಾರಣಾ ನ್ಯಾಯಾಲಯ 10 ವರ್ಷಗಳ ಸೆರೆವಾಸ ವಿಧಿಸಿತ್ತು.

78 ವರ್ಷದ ಓಂ ಪ್ರಕಾಶ್ ಚೌಟಾಲಾ ಮತ್ತು ಅವರ ಪುತ್ರ ಅಜಯ್ ಚೌಟಾಲಾ ಹಾಗೂ ಇತರ 53 ಮಂದಿ ರಾಜ್ಯದಲ್ಲಿ 2000ನೇ ಇಸವಿಯಲ್ಲಿ ನಡೆದ 3206 ಕಿರಿಯ ಮೂಲ ತರಬೇತಿ (ಜೆಬಿಟಿ) ಪಡೆದ ಶಿಕ್ಷಕರ ನೇಮಕಾತಿ ಪ್ರಕರಣದಲ್ಲಿ ಅಕ್ರಮ ನೇಮಕಾತಿ ನಡೆಸಿದ ತಪ್ಪಿತಸ್ಥರು ಎಂದು ವಿಚಾರಣಾ ನ್ಯಾಯಾಲಯ ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT