ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ಉದಯಕ್ಕೆ ಕ್ಷಣಗಣನೆ

Last Updated 1 ಜೂನ್ 2014, 12:19 IST
ಅಕ್ಷರ ಗಾತ್ರ

ಹೈದರಾಬಾದ್‌ (ಪಿಟಿಐ): ನೂತನ ತೆಲಂಗಾಣ ರಾಜ್ಯ ಉದಯಕ್ಕೆ ಕ್ಷಣಗಣನೆ ಆರಂಭವಾಗಿದ್ದು ತೆಲಂಗಾಣ ಪ್ರಾಂತ್ಯದ ಜನರು ಆಹೋ ರಾತ್ರಿ ಸಂಭ್ರಮಕ್ಕೆ ಕಾತುರರಾಗಿದ್ದಾರೆ.

ನಾಳೆ ಅಧಿಕೃತವಾಗಿ ತೆಲಂಗಾಣ 29ನೇ ರಾಜ್ಯವಾಗಿ ಉದಯವಾಗಲಿದೆ. ಆಂಧ್ರಪ್ರದೇಶದಿಂದ ವಿಭಜನೆಗೊಂಡು ತೆಲಂಗಾಣ ರಾಜ್ಯ ಉದಯಿಸಿದೆ.  

ತೆಲಂಗಾಣ ರಾಷ್ಟ್ರ ಸಮಿತಿಯ ಕಾರ್ಯಕರ್ತರು ಮತ್ತು ಆ ಭಾಗದ ಜನರು ಸಂಭ್ರಮಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ರಾತ್ರಿ 12 ಗಂಟೆಗೆ ಸರಿಯಾಗಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸುವುದಾಗಿ ತೆಲಂಗಾಣ ಭಾಗದ ಜನರು ತಿಳಿಸಿದ್ದಾರೆ.

ಹೈದರಾಬಾದ್‌ ನಗರ ಗುಲಾಬಿ ಬಣ್ಣದ ಪಟಗಳಿಂದ ಕಂಗೊಳಿಸುತ್ತಿದೆ. ವಿಜಯೋತ್ಸವ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಿಆರ್‌ಎಸ್‌ ವರಿಷ್ಠ ಚಂದ್ರಶೇಖರ ರಾವ್‌ ಅವರು ನೂತನ ರಾಜ್ಯದ ಮುಖ್ಯಮಂತ್ರಿಯಾಗಿ  ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT