ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜ್‌ಪಾಲ್ ಮಧ್ಯಂತರ ಜಾಮೀನು ವಿಸ್ತರಣೆ

Last Updated 3 ಜೂನ್ 2014, 10:59 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತ ತೆಹೆಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಅವರ ಮಧ್ಯಂತರ ಜಾಮೀನು ಅವಧಿ  ಜೂನ್ 27ರವರೆಗೆ ವಿಸ್ತರಣೆಯಾಗಿದೆ. ತಾಯಿಯ ಅಂತ್ಯಂಸಂಸ್ಕಾರಕ್ಕೆ ಸಂಬಂಧಿಸಿದ ವಿಧಿವಿಧಾನಗಳು ಬಾಕಿ ಇರುವ ಕಾರಣಕ್ಕೆ ಸುಪ್ರೀಂಕೋರ್ಟ್  ಮಂಗಳವಾರ ಈ ನಿರ್ಧಾರ ತೆಗೆದುಕೊಂಡಿದೆ.

ಗೋವಾ ಸರ್ಕಾರದ ತೀವ್ರ ವಿರೋಧದ ನಡುವೆಯೂ ನ್ಯಾಯಾಧೀಶರು ತೇಜ್‌ಪಾಲ್ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿದ್ದಾರೆ. ಈ ಮೊದಲು ಸುಪ್ರೀಂಕೋರ್ಟ್ ಮೇ 19ರಂದು ತೇಜ್‌ಪಾಲ್ ಅವರಿಗೆ ತಮ್ಮ ತಾಯಿಯ  ಅಂತ್ಯಸಂಸ್ಕಾರದ ವಿಧಿವಿಧಾನಗಳಲ್ಲಿ ಭಾಗಿಯಾಗಲು ಮೂರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜ್‌ಪಾಲ್ ಅವರನ್ನು ನವೆಂಬರ್ 30, 2013ರಂದು ಗೋವಾ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT