ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತರ ದೌರ್ಜನ್ಯ  ಖಂಡಿಸಿ ಪ್ರತಿಭಟನೆ

Last Updated 23 ಜುಲೈ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗುಜರಾತ್‌ನಲ್ಲಿ ಪರಿಶಿಷ್ಟ ಜಾತಿಯವರ ಮೇಲೆ ನಡೆದ ದೌರ್ಜನ್ಯ ಹಾಗೂ ದಬ್ಬಾಳಿಕೆ ಖಂಡಿಸಿ ಕಾಂಗ್ರೆಸ್‌ ಪಕ್ಷದಿಂದ  ಶನಿವಾರ ಪ್ರತಿಭಟನೆ ನಡೆಯಿತು.
ಆನಂದರಾವ್‌ ವೃತ್ತದ ಗಾಂಧಿ ಪ್ರತಿಮೆ ಬಳಿ ಸೇರಿದ್ದ ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ
ದರು. ಈ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ‘ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲೇ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ವಿಷಾದನೀಯ’ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ದಲಿತರು ಹಾಗೂ ಹಿಂದುಳಿದ ವರ್ಗದ ಜನರಿಗೆ ರಕ್ಷಣೆ ಇಲ್ಲದಂತಾಗಿದೆ. ಇದು ಹೀಗೆ ಮುಂದುವರಿದರೆ ಕಷ್ಟದ ದಿನಗಳು ಬರಲಿವೆ. ಮೋದಿ ಅವರು ತಮ್ಮ ತಪ್ಪು ತಿದ್ದಿಕೊಂಡು ದೇಶದ ಜನರ ಕ್ಷಮೆಯಾಚಿಸಬೇಕು. ದಲಿತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು ಒತ್ತಾ    ಯಿಸಿದರು.
ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ದಲಿತರು, ಹಿಂದುಳಿದವರಿಗೆ ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT