ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನಾಂಕ ಜೂನ್ 6ರತನಕ ವಿಸ್ತರಣೆ

ಪಿಯುಸಿ: ಮರುಎಣಿಕೆ ಅರ್ಜಿ
Last Updated 26 ಮೇ 2015, 20:21 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯು ಪೂರಕ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಜೂನ್‌ 6ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಅಲ್ಲದೆ, ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಜೂನ್‌ 3ರವರೆಗೆ ಅವಕಾಶ ನೀಡಲಾಗಿದೆ.

ಉತ್ತರ ಪತ್ರಿಕೆಗಳ ನಕಲು ಪ್ರತಿ ಕೋರಿ 22,915 ಅರ್ಜಿಗಳು ಬಂದಿವೆ. 13,500 ನಕಲು ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ತ್ವರಿತ ಅಂಚೆ ಮೂಲಕ ಇದುವರೆಗೆ ರವಾನಿಸಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಉತ್ತರ ಪತ್ರಿಕೆಗಳ ನಕಲು ಪ್ರತಿ ಯಾವ ವಿದ್ಯಾರ್ಥಿಗಳಿಗೆ ರವಾನೆಯಾಗಿದೆ ಎಂಬ ಮಾಹಿತಿ ಇಲಾಖೆಯ ವೆಬ್‌ಸೈಟ್‌ನಲ್ಲಿ (www.pue.kar.nic.in) ಇದೆ ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ ತಡೆಹಿಡಿಯಲಾಗಿದ್ದ 144 ವಿದ್ಯಾರ್ಥಿಗಳ ಪೈಕಿ 33 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT