ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಅಪರಾಧ ಹಿನ್ನೆಲೆಯ114 ಅಭ್ಯರ್ಥಿಗಳು

Last Updated 30 ಜನವರಿ 2015, 14:00 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವವರಲ್ಲಿ 114 ಮಂದಿ ಅಪರಾಧ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿದ್ದಾರೆ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಶುಕ್ರವಾರ ಹೇಳಿದೆ.

ಎಡಿಆರ್ ಫೆ. 7ರಂದು ನಡೆಯುವ ದೆಹಲಿ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿದಿರುವ 673 ಅಭ್ಯರ್ಥಿಗಳ ಪ್ರಮಾಣ ಪತ್ರಗಳ ವಿಶ್ಲೇಷಣೆ ನಡೆಸಿದೆ. ಬಿಜೆಪಿ ಕಣಕ್ಕಿಳಿಸಿರುವವರಲ್ಲಿ ಅತಿ ಹೆಚ್ಚು ಅಂದರೆ 27 ಅಭ್ಯರ್ಥಿಗಳು ಅಪರಾಧ ಹಿನ್ನೆಲೆಯುಳ್ಳವರಿದ್ದಾರೆ. ನಂತರದ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 21, ಕಾಂಗ್ರೆಸ್ ನ 12 ಅಭ್ಯರ್ಥಿಗಳು ಅಪರಾಧ ಹಿನ್ನೆಲೆಯುಳ್ಳವರಿದ್ದಾರೆ ಎಂದು ವಿವರಿಸಿದೆ.

ತುಘಲಕಾಬಾದ್ ಕ್ಷೇತ್ರದ ಐದು ಅಭ್ಯರ್ಥಿಗಳು ಅಪರಾಧ ಹಿನ್ನೆಲೆಯುಳ್ಳವರಿದ್ದಾರೆ ಎಂದು ಎಡಿಆರ್ ಹೇಳಿದೆ.

ದೆಹಲಿ ವಿಧಾನಸಭೆ ಚುನಾವಣೆ ಕಣದಲ್ಲಿರುವ 673 ಅಭ್ಯರ್ಥಿಗಳ ಪೈಕಿ 114 ಅಭ್ಯರ್ಥಿಗಳು ಶೇ 17ರಷ್ಟು ಮಂದಿ ಅಪರಾಧ ಹಿನ್ನೆಲೆಯುಳ್ಳವರಿದ್ದಾರೆ. 2013ರಲ್ಲಿ ನಡೆದ ಚುನಾವಣೆಯಲ್ಲಿ ಶೇ 16ರಷ್ಟು, 2008ರಲ್ಲಿ ನಡೆದ ಚುನಾವಣೆಯಲ್ಲಿ ಶೇ 14ರಷ್ಟು ಅಭ್ಯರ್ಥಿಗಳು ಅಪರಾಧ ಹಿನ್ನೆಲೆಯುಳ್ಳವರು ಸ್ಪರ್ಧಿಸಿದ್ದರು ಎಂದು ಎಡಿಆರ್ ಸಂಸ್ಥೆಯ ಸಂಸ್ಥಾಪಕ ಜಗದೀಪ್ ಚೋಕ್ರಾ ಹೇಳಿದ್ದಾರೆ.

ಅಪರಾಧ ಹಿನ್ನೆಲೆಯುಳ್ಳ 114 ಅಭ್ಯರ್ಥಿಗಳಲ್ಲಿ 74 ಮಂದಿ ಗಂಭೀರ ಅಪರಾಧಗಳಾದ ಕೊಲೆ, ಕೊಲೆಗೆ ಯತ್ನ, ಹಲ್ಲೆ, ‘ಚೆಕ್ ಬೌನ್ಸ್’ ಹಾಗೂ ಮಹಿಳೆಯವ ವಿರುದ್ಧದ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುರಿತು ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

673 ಅಭ್ಯರ್ಥಿಗಳ ಪೈಕಿ ಒಬ್ಬ ಅಭ್ಯರ್ಥಿ ಕೊಲೆ ಪ್ರಕರಣದಲ್ಲಿ, ಐವರು ಅಭ್ಯರ್ಥಿಗಳು ಕೊಲೆಗೆ ಯತ್ನ, ಎಂಟು ಅಭ್ಯರ್ಥಿಗಳು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ, ಒಬ್ಬ ಅಭ್ಯರ್ಥಿ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ವಿಶ್ಲೇಷಣೆ ವೇಳೆ ಮಾಹಿತಿ ಲಭ್ಯವಾಗಿದೆ ಎಂದು ಅವರು ಹೇಳಿದ್ದಾರೆ.

‘ರೆಡ್ ಅಲರ್ಟ್’ ಕ್ಷೇತ್ರಗಳನ್ನು ಗುರುತಿಸಲಾಗಿದ್ದು, ರಾಜೋರಿ ಗಾರ್ಡೀನ್ ಮತ್ತು ತಿಲಕ್ ನಗರ ಕ್ಷೇತ್ರಗಳಲ್ಲಿ ನಾಲ್ವರು ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿದ್ದಾರೆ. ಉಳಿಂತೆ 17 ‘ರೆಡ್ ಅಲರ್ಟ್’ ಕ್ಷೇತ್ರಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT