ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ನರೇಂದ್ರ ಮೋದಿ ಯುಗಾರಂಭ

Last Updated 26 ಮೇ 2014, 14:43 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತ ದೇಶದ 15ನೇ ಪ್ರಧಾನ ಮಂತ್ರಿಯಾಗಿ ನರೇಂದ್ರ ದಾಮೋದರದಾಸ್ ಮೋದಿ ಅವರು ಸೋಮವಾರ ಸಂಜೆ 6.16ಕ್ಕೆ ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದ ಪ್ರಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಮೋದಿ ಅವರಿಗೆ ಅಧಿಕಾರ ಗೌಪ್ಯತೆ ಬೋಧಿಸಿದರು.

ನರೇಂದ್ರ ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಪಾಕಿಸ್ತಾನದ ಪ್ರಧಾನಿ ನವಾಜ್‌ ಷರೀಫ್‌, ಶ್ರೀಲಂಕಾದ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಸೇರಿದಂತೆ ಸಾರ್ಕ್‌ ರಾಷ್ಟ್ರಗಳ ನಾಯಕರು, ಉಪಪ್ರಧಾನಿ ಹಮೀದ್‌ ಅನ್ಸಾರಿ, ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ, ನಿರ್ಗಮಿತ ಪ್ರಧಾನಿ ಮನಮೋಹನ್‌ ಸಿಂಗ್, ಸಿಂಗ್‌ ಅವರ ಪತ್ನಿ ಕೌರ್‌, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಾಜಿ ಸ್ಪೀಕರ್‌ ಮೀರಾ ಕುಮಾರ್‌, ರವಿಶಂಕರ್ ಗುರೂಜಿ ಸೇರಿದಂತೆ ಹಲವು ಗಣ್ಯರು ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾದರು.

ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಭವ್ಯ ಸಮಾರಂಭದಲ್ಲಿ ಬಾಲಿವುಡ್ ಕಲಾವಿದರಾದ ಶತ್ರುಘ್ನ ಸಿನ್ಹಾ, ಹೇಮಾ ಮಾಲಿನಿ, ಅವರ ಪತಿ ಧರ್ಮೇಂದ್ರ, ಸಲ್ಮಾನ್ ಖಾನ್, ಅವರ ತಂದೆ ಸಲೀಂ ಖಾನ್, ವಿವೇಕ್ ಒಬೇರಾಯ್, ಅನುಪಮ್ ಖೇರ್, ಅವರ ಪತ್ನಿ ಕಿರಣ್ ಖೇರ್, ವಿನೋದ್ ಖನ್ನಾ ಹಾಗೂ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT