ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧನದಾಹಿ ವೈದ್ಯರು

ಅಕ್ಷರ ಗಾತ್ರ

ಗಂಭೀರ ಸ್ವರೂಪವಲ್ಲದ ಕಾಯಿಲೆ ಇಲ್ಲದಿದ್ದರೂ ವೈದ್ಯರು ಧನದಾಹದಿಂದ ಅಮಾಯಕ ಮಹಿಳೆಯರ ಗರ್ಭಕೋಶಗಳನ್ನು ತೆಗೆದುಹಾಕುವುದು (ಪ್ರ.ವಾ., ಜೂನ್‌ 30) ಅಕ್ಷಮ್ಯ. ಈ ಬಗ್ಗೆ ದಾಖಲೆಗಳ ಸಮೇತ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲದಿರುವುದು ವಿಪರ್ಯಾಸ.

ಇಂತಹ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಎಷ್ಟು ಮುಗ್ಧ ಮಹಿಳೆಯರು ಶಸ್ತ್ರಚಿಕಿತ್ಸೆಗೆ ಒಳಗಾಗುವರೋ? ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗಳು ಹೆಚ್ಚಾಗಲು ಕಾರಣವನ್ನು ಸಹ ತಿಳಿದುಕೊಳ್ಳಬೇಕು.

ಖಾಸಗಿ ಆಸ್ಪತ್ರೆಗಳಲ್ಲಿ ಕೆಲವು ಶಸ್ತ್ರಚಿಕಿತ್ಸೆಗಳನ್ನು ನಡೆಸಬೇಕಾದರೆ ಸರ್ಕಾರದಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಬೇಕು. ಅಂದಾಗ ಮಾತ್ರ ಇಂತಹ ಪಿಡುಗನ್ನು ಸ್ವಲ್ಪಮಟ್ಟಿಗಾದರೂ ತಡೆಗಟ್ಟಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT