ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದೆಲ್ಲೆಡೆ ಪೊಲೀಸ್‌ ಬಿಗಿ ಬಂದೋಬಸ್ತ್‌

ಈದ್‌ ಉಲ್‌ ಫಿತರ್‌
Last Updated 28 ಜುಲೈ 2014, 19:32 IST
ಅಕ್ಷರ ಗಾತ್ರ

ಬೆಂಗಳೂರು: ಈದ್‌ ಉಲ್‌ ಫಿತರ್‌ ಪ್ರಯುಕ್ತ ನಗರದೆಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಅಲೋಕ್‌ಕುಮಾರ್‌ ತಿಳಿಸಿದ್ದಾರೆ.

ಪ್ರಾರ್ಥನಾ ಮಂದಿರ, ಪ್ರಮುಖ ರಸ್ತೆಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸುಗಮ ಸಂಚಾರಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ನಗರದ ಸಿವಿಲ್‌ ಪೊಲೀಸರು ಮತ್ತು ಸಂಚಾರ ವಿಭಾಗದ ಎಲ್ಲಾ ಸಿಬ್ಬಂದಿಯನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ.

ಅಲ್ಲದೇ, ಕ್ಷಿಪ್ರ ಕಾರ್ಯಪಡೆಯ ಎರಡು ಕಂಪೆನಿ, ರಾಜ್ಯ ಮೀಸಲು ಪೊಲೀಸ್‌ ಪಡೆಯ 32 ತುಕಡಿ, ನಗರ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ 20 ತುಕಡಿ ಹಾಗೂ ಗೃಹರಕ್ಷಕ ದಳದ 600 ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸಿಬ್ಬಂದಿ ಮಂಗಳವಾರ ಸಂಜೆ 6ರವರೆಗೆ ಎರಡು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸ್ಥಳಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದೆ. ಆ ಸ್ಥಳಗಳಲ್ಲಿ ಗಸ್ತು ಸಹ ಹೆಚ್ಚಿಸಲಾಗಿದೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಮತ್ತು ಅಹಿತಕರ ಘಟನೆಗಳಿಗೆ ಪ್ರಚೋದನೆ ನೀಡುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಅಲೋಕ್‌ಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT