ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರಸಿಂಗ್ ಯಾದವ್ ಉದ್ದೀಪನಾ ಮದ್ದು ಸೇವನೆ ಸಾಬೀತು

ಕಮರಿದ ಕುಸ್ತಿ ಪಟುವಿನ ಒಲಿಂಪಿಕ್ಸ್ ಕನಸು
Last Updated 24 ಜುಲೈ 2016, 16:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ಕುಸ್ತಿ ಪಟು ನರಸಿಂಗ್ ಯಾದವ್ ಅವರು ಉದ್ದೀಪನಾ ಮದ್ದು ಸೇವನೆ ಮಾಡಿರುವುದು ಸಾಬೀತಾಗಿದ್ದು, ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಅವರ ಕನಸು ಕಮರಿದಂತಾಗಿದೆ.

ನರಸಿಂಗ್ ಅವರ ಮೂತ್ರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ನಿಷೇಧಿತ  ಉದ್ದೀಪನಾ ಮದ್ದಿನ ಅಂಶ ಇರುವುದು ಪತ್ತೆಯಾಗಿದೆ ಎಂದು  ರಾಷ್ಟ್ರೀಯ ಉದ್ದೀಪನಾ ಮದ್ದು ತಡೆ ಘಟಕದ (ನಾಡ) ಪ್ರಧಾನ ನಿರ್ದೇಶಕ ನವೀನ್ ಅಗರ್‌ವಾಲ್ ಹೇಳಿದ್ದಾರೆ.

ಇದನ್ನು ಅಲ್ಲಗಳೆದಿರುವ ನರಸಿಂಗ್, ‘ಈ ಪ್ರಕರಣದಲ್ಲಿ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ’ ಎಂದು ಹೇಳಿದ್ದಾರೆ.

‘ನಾನೊಬ್ಬ ವೃತ್ತಿಪರ ಕುಸ್ತಿ ಪಟು. ಕಳೆದ 15 ವರ್ಷಗಳಿಂದ ಕುಸ್ತಿ ಆಡುತ್ತಿದ್ದೇನೆ. ಈ ಹಿಂದೆ 25–30 ಬಾರಿ ನಾನು ಪರೀಕ್ಷೆಗೆ ಒಳಗಾಗಿದ್ದು, ಎಲ್ಲಿಯೂ ಉದ್ದೀಪನಾ ಮದ್ದಿನ ಅಂಶ ಇದೆ ಎಂದು ವರದಿ ಬಂದಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT