ನವದೆಹಲಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಛತ್ತೀಸಗಡದಲ್ಲಿ ಚುನಾವಣಾ ಪ್ರಚಾರ ರ್ಯಾಲಿ ವೇಳೆ ಕಾಂಗ್ರೆಸ್ ಪಕ್ಷದ ಚಿಹ್ನೆಗೆ ‘ಖೂನಿ ಪಂಜಾ’ (ರಕ್ತಸಿಕ್ತ ಹಸ್ತ) ಪದ ಬಳಸಿರುವುದಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನು ಮುಂದೆ ಸಾರ್ವಜನಿಕ ಸಭೆಗಳಲ್ಲಿ ಇಂತಹ ಹೇಳಿಕೆ ನೀಡುವಾಗ ಜಾಗರೂಕರಾಗಿರುವಂತೆ ಮೋದಿ ಅವರಿಗೆ ಆಯೋಗ ಗುರುವಾರ ಎಚ್ಚರಿಕೆಯ ಸಂದೇಶ ನೀಡಿದೆ.

ಮೋದಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ, ಚುನಾವಣಾ ನೀತಿ–ಸಂಹಿತೆ ಉಲ್ಲಂಘಿಸಿದ ಕಾರಣಕ್ಕೆ ತಾನು ನೀಡಿದ್ದ ನೋಟಿಸ್ಗೆ
ಮೋದಿ ನೀಡಿರುವ ಉತ್ತರ ತನಗೆ ತೃಪ್ತಿ ತಂದಿಲ್ಲ ಎಂದೂ ಅಸಮಾಧಾನ ಸೂಚಿಸಿದೆ. ಈ ಸಂಬಂಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.