ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೀನ್‌ ಪಟ್ನಾಯಕ್‌ಗೆ ಮತ್ತೆ ಸಿ.ಎಂ ಗಾದಿ

Last Updated 18 ಮೇ 2014, 19:30 IST
ಅಕ್ಷರ ಗಾತ್ರ

ಭುವನೇಶ್ವರ (ಪಿಟಿಐ): ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್‌ ಪಟ್ನಾ­ಯಕ್‌ ಅವರು ಸತತ ನಾಲ್ಕನೇ ಬಾರಿಗೆ ಒಡಿಶಾ ಮುಖ್ಯಮಂತ್ರಿ­ಯಾಗಲಿದ್ದಾರೆ.

ಬಿಜೆಡಿಯ ಮುಖ್ಯ ಕಚೇರಿಯಲ್ಲಿ ಭಾನುವಾರ ನಡೆದ ಶಾಸಕಾಂಗ ಪಕ್ಷದ ಮೊದಲ ಸಭೆಯಲ್ಲಿ ನವೀನ್‌ ಪಟ್ನಾ­ಯಕ್‌ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧ­ವಾಗಿ ಆಯ್ಕೆ ಮಾಡಲಾಯಿತು.

ನಂತರ ಮಾತನಾಡಿದ ಪಟ್ನಾ­ಯಕ್, ‘ರಾಜ್ಯ ಹಾಗೂ ಜನತೆಯ ಅಭಿವೃದ್ಧಿಗಾಗಿ ನಾವೆಲ್ಲ ಹೊಸ ಉತ್ಸಾಹ­ದಿಂದ ಶ್ರಮಿಸುತ್ತೇವೆ’ ಎಂದು ಭರವಸೆ ನೀಡಿದರು.

147 ಸದಸ್ಯ ಬಲದ ಒಡಿಶಾ ವಿಧಾನ­­ಸಭೆ ಚುನಾವಣೆಯಲ್ಲಿ ಬಿಜೆಡಿ 117 ಕ್ಷೇತ್ರಗಳಲ್ಲಿ ಭರ್ಜರಿ ಜಯ ಸಾಧಿಸಿ ಅತಿ ದೊಡ್ಡ ಪಕ್ಷವಾಗಿ ಹೊರ­ಹೊಮ್ಮಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT