ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕತ್ವ ಗುಣ ಬೆಳೆಸಲು ಸಲಹೆ

Last Updated 22 ಆಗಸ್ಟ್ 2014, 9:51 IST
ಅಕ್ಷರ ಗಾತ್ರ

ರಾಯಚೂರು: ಯುವ ನಾಯಕತ್ವ ಬೆಳೆಸಲು ಪೂರಕವಾಗಿ ನೆಹರು ಯುವ ಕೇಂದ್ರ ಕಾರ್ಯನಿರ್ವಹಣೆ ಮಾಡ­ಬೇಕು. ಸರ್ಕಾರದ ಸೌಕರ್ಯಗಳನ್ನು ಸೂಕ್ತ ರೀತಿಯಲ್ಲಿ ಜನ ಸಾಮಾನ್ಯರಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಎಸ್‌,ಶಶಿಕಾಂತ್‌ ಸೆಂಥಿಲ್‌ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನೆಹರು ಯುವ ಕೇಂದ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕಳೆದ ಸಭೆ ನಡಾವಳಿಗಳ ಹಾಗೂ ಕಾರ್ಯಚಟುವಟಿಕೆ, ನೆಹರು ಯುವ ಕೇಂದ್ರಕ್ಕೆ ನಿವೇಶನ ಕಲ್ಪಿಸುವ,  ಜಿಲ್ಲಾ ಮಟ್ಟದ ಯುವ ಸಂಘ ಪ್ರಶಸ್ತಿ ಆಯ್ಕೆ, ನೆಹರು ಯುವ ಸಾಥಿಗಳನ್ನು ಆಯ್ಕೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. 

ಯುವಕರಿಗೆ ವಿಶೇಷ ಚಟುವ­ಟಿಕೆಗಳನ್ನು ನಡೆಸುವ ಮೂಲಕ ಯವಜನರಿಗೆ ದೇಶಾಭಿಮಾನ ಹಾಗೂ ಸೇವಾ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ನೆಹರು ಅಧಿಕಾರಿಗಳಿಗೆ ಸೂಚಿಸಿದರು.  ಜಿಲ್ಲಾ ಯುವ ಸಮನ್ವಯಾಧಿಕಾರಿ ಮಾಲತಿ ಎಂ. ಗಾಯಕವಾಡ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ಬೋರೆಡ್ಡಿ, ವಿದ್ಯಾಸಾಗರ, ನೆಹರು ಯುವ ಕೇಂದ್ರದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT