ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಪೊಲೀಸ್ ಸಿಬ್ಬಂದಿಯಿಂದ ಪ್ರತಿಭಟನೆ

ಆರೋಗ್ಯ ಯೋಜನೆ, ಕ್ಯಾಂಟೀನ್ ಸೌಲಭ್ಯ ವಿಸ್ತರಣೆಗೆ ಆಗ್ರಹ
Last Updated 5 ಮಾರ್ಚ್ 2015, 6:00 IST
ಅಕ್ಷರ ಗಾತ್ರ

ಬೀದರ್:  ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಅವರ ಕುಟುಂಬದ ಪಿಂಚಣಿ­ದಾರರಿಗೆ ಆರೋಗ್ಯ ಯೋಜನೆ, ಕ್ಯಾಂಟೀನ್ ಸೌಲಭ್ಯ ವಿಸ್ತರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ನಗರದಲ್ಲಿ ಬುಧ­ವಾರ ಪ್ರತಿಭಟನೆ ನಡೆಸಿದರು.

ಸಂಘದ ಅಧ್ಯಕ್ಷ ನಾಗೇಂದ್ರ ಬಲ್ಲೂರೆ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತ­ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು. ದೇಶದಲ್ಲಿ ಸೈನಿಕರ ಜೊತೆಗೆ ಮಾಜಿ ಸೈನಿಕರಿಗೂ ಆರೋಗ್ಯ ಯೋಜನೆ, ಕ್ಯಾಂಟೀನ್ ಸೌಲಭ್ಯಗಳನ್ನು ಒದಗಿಸ­ಲಾಗಿದೆ.

ಆದರೆ, ಸೇವಾನಿತರ ಪೊಲೀಸ­ರಿಗೆ ಇರುವ ಸೌಕರ್ಯಗಳನ್ನು ಮಾತ್ರ ನಿವೃತ್ತರಿಗೆ ಕಲ್ಪಿಸಿಲ್ಲ ಎಂದು ಮುಖ್ಯ­ಮಂತ್ರಿ­ಗಳಿಗೆ ಬರೆದ ಮನವಿ ಪತ್ರದಲ್ಲಿ ಅಳಲು ತೋಡಿಕೊಂಡಿದ್ದಾರೆ. ನಿವೃತ್ತ ಪೊಲೀಸ್ ಸಿಬ್ಬಂದಿ ಮಾದರಿ­ಯಲ್ಲಿಯೇ ಪಿಂಚಣಿದಾರರ ಶವ ಸಂಸ್ಕಾ­ರಕ್ಕೆ ಆರ್ಥಿಕ ಸಹಾಯ ನೀಡ­ಬೇಕು.

ನಿವೃತ್ತ ಪೊಲೀಸರ ಕಲ್ಯಾಣ ನಿಧಿಗೆ ಆಯವ್ಯಯದಲ್ಲಿ ಪ್ರತಿ ವರ್ಷ ₹ 5 ಕೋಟಿ ಅನುದಾನ ಒದಗಿಸಬೇಕು. ಕರ್ನಾ­ಟಕ ರಾಜ್ಯ ನಿವೃತ್ತ ಪೊಲೀಸ್ ಕಲ್ಯಾಣ ನಿಧಿ ನಿಯಮ 1975ಕ್ಕೆ ತಿದ್ದು­ಪಡಿ ತರುವುದರ ಮೂಲಕ ನಿವೃತ್ತ ಪೊಲೀಸ­ರಿಗೂ ವೈದ್ಯಕೀಯ ಸೌಲಭ್ಯ ಒದಗಿ­ಸಬೇಕು ಎಂದು ಆಗ್ರಹಿಸಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT