ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟಿಸ್‌ ಜಾರಿಗೆ ಹೈಕೋರ್ಟ್‌ ಆದೇಶ

Last Updated 30 ನವೆಂಬರ್ 2015, 20:05 IST
ಅಕ್ಷರ ಗಾತ್ರ

ಬೆಂಗಳೂರು: ಪಾಲಿಕೆಯ ವಾರ್ಡ್‌ ಸಮಿತಿ ಸದಸ್ಯರಿಗಿರುವ ನಿರಾಕರಣ  (ವಿಟೊ) ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗಳಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠವು ಸೋಮವಾರ ವಿಚಾರಣೆ ನಡೆಸಿತು. ‘ಯಾವುದೇ ಪಾಲಿಕೆಗಳಲ್ಲಿ ಜನಪ್ರತಿನಿಧಿಗಳ ತೀರ್ಮಾನವೇ ಅಂತಿಮವಾಗಿರಬೇಕು.

ಆದರೆ ರಾಜ್ಯ ಮಹಾನಗರ ಪಾಲಿಕೆ ಕಾಯ್ದೆ–1976ರ ಉಪ ಕಲಂ 13 ಎಚ್‌ (7)ರ ಅನುಸಾರ ವಾರ್ಡ್‌ ಸಮಿತಿ ಅಧ್ಯಕ್ಷರಿಗೆ ಕೊಡಮಾಡಲಾಗಿರುವ ನಿರಾಕರಣ ಅಧಿಕಾರ ಸಂವಿಧಾನ ಬಾಹಿರ’ ಎಂಬುದು ಅರ್ಜಿದಾರರ ದೂರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT