ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಧೀಶರ ಬದಲಾವಣೆಗೆ ಅರ್ಜಿ: 9ಕ್ಕೆ ಹೈಕೋರ್ಟ್‌ ಆದೇಶ

Last Updated 2 ಮಾರ್ಚ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು  ಸೆಷನ್ಸ್‌ ನ್ಯಾಯಾಧೀಶ ಜಿ.ಬಿ.ಮುದಿಗೌಡರ್‌  ನಡೆಸುವುದು ಬೇಡ’ ಎಂದು ಕೋರಿ ರಾಮಕಥಾ ಗಾಯಕಿ ಪ್ರೇಮಲತಾ ಶಾಸ್ತ್ರಿ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯ ಮೇಲಿನ ಆದೇಶವನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಿದ ಪ್ರದೀಪ್‌ ಡಿ ವೈಂಗಣಕರ ಅವರಿದ್ದ ಏಕಸದಸ್ಯ ಪೀಠವು, ಈ ಕುರಿತಂತೆ ಇದೇ 9ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿತು.

ಸ್ವಾಮೀಜಿ ಪರ ಹಾಜರಿದ್ದ ವಕೀಲ ಶಂಕರ ಹೆಗಡೆ ಅವರು, ‘ಅರ್ಜಿದಾರರು ಈ ಪ್ರಕರಣದಲ್ಲಿ ಪದೇ ಪದೇ ಈ ರೀತಿ ನ್ಯಾಯಾಂಗದ ಅಧಿಕಾರಿಗಳ ವಿರುದ್ಧ ಆರೋಪ ಮಾಡುತ್ತಲೇ ಬಂದಿದ್ದಾರೆ. ಇದು ಅವರಿಗೆ ಹವ್ಯಾಸ ಆಗಿದೆ’ ಎಂದು ದೂರಿದರು.

‘ಪ್ರಕರಣವು ಈ ತನಕದ 14 ಮುದ್ದತುಗಳಲ್ಲಿ (ಹಿಯರಿಂಗ್‌) 4 ಕೋರ್ಟ್‌ಗಳ ಬದಲಾವಣೆ ಕಂಡಿದೆ.  ವಿಚಾರಣೆ ಸರಿಯಾಗಿ ಆರಂಭವಾಗಲು ಬಿಡುತ್ತಿಲ್ಲ. ಅರ್ಜಿದಾರರು ಈವರೆಗೆ ಈ ಪ್ರಕರಣದಲ್ಲಿ ನಾಲ್ವರು ನ್ಯಾಯಾಂಗ ಅಧಿಕಾರಿಗಳು ಹಾಗೂ ನಾಲ್ವರು ತನಿಖಾಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ. ಇದು ಅವರಿಗೆ ನ್ಯಾಯಾಂಗದ ಮೇಲೆ ವಿಶ್ವಾಸ ಇಲ್ಲ ಎಂಬುದನ್ನು ತೋರಿಸುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT