ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಕಜ್‌ ಅಡ್ವಾಣಿಗೆ ರಾಷ್ಟ್ರಪತಿ ಅಭಿನಂದನೆ

Last Updated 31 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬುಧವಾರ ಲೀಡ್ಸ್‌ನಲ್ಲಿ ಕೊನೆಗೊಂಡ ವಿಶ್ವ ಬಿಲಿಯರ್ಡ್ಸ್‌ ಚಾಂಪಿಯನ್‌ಷಿಪ್‌ನ ‘ಟೈಮ್‌’ ಮಾದರಿಯಲ್ಲಿ  ಪ್ರಶಸ್ತಿ ಗೆದ್ದಿರುವ ಕರ್ನಾಟಕದ ಪಂಕಜ್‌ ಅಡ್ವಾಣಿ ಅವರನ್ನು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅಭಿನಂದಿಸಿದ್ದಾರೆ.

‘ಲೀಡ್ಸ್‌ನಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ನೀವು 12ನೇ ಬಾರಿ ವಿಶ್ವ ಕಿರೀಟ ಮುಡಿಗೇರಿಸಿಕೊಂಡ ವಿಷಯ ತಿಳಿದು ತುಂಬಾ ಸಂತಸವಾಯಿತು. ನಿಮಗೆ ಹೃದಯಪೂರ್ವಕ ಅಭಿನಂದನೆ­ಗಳು. ನಿಮ್ಮ ಸಾಧನೆಯಿಂದ ದೇಶ ಹೆಮ್ಮೆಪಡುವಂತಾಗಿದೆ. ನಿಮ್ಮ ಯಶಸ್ಸಿನ ಪಯಣ ಹೀಗೆ ಮುಂದುವರಿಯಲಿ’ ಎಂದು  ಪ್ರಣವ್‌ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಸಿಎಂ ಮೆಚ್ಚುಗೆ: ರಾಜ್ಯಕ್ಕೆ ಕೀರ್ತಿ ತಂದಿರುವ  ಪಂಕಜ್‌ ಅಡ್ವಾಣಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರಶಂಸಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT