ಬೆಂಗಳೂರು: ಉಡುಪಿಯ ಕೃಷ್ಣ ದೇವಾಲಯದಲ್ಲಿ ಪಂಕ್ತಿಭೇದದ ಹೆಸರಿನಲ್ಲಿ ನಡೆಯುತ್ತಿರುವ ಅಮಾನವೀಯ ಆಚರಣೆ ನಿಲ್ಲಬೇಕು ಹಾಗೂ ದೇವಾಲಯವನ್ನು ಮುಜರಾಯಿ ಇಲಾಖೆಗೆ ವಹಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ಸದಸ್ಯರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಒಕ್ಕೂಟದ ಸದಸ್ಯೆ ಇಂದಿರಾ ಕೃಷ್ಣಪ್ಪ, ‘ಇತ್ತೀಚೆಗೆ ಕೃಷ್ಣ ದೇವಾಲಯದಲ್ಲಿ ಉಪನ್ಯಾಸಕಿ ವನಿತಾ ಶೆಟ್ಟಿ ಎಂಬುವರನ್ನು ಊಟದ ಪಂಕ್ತಿಯಿಂದ ಅಮಾನವೀಯವಾಗಿ ಹೊರದಬ್ಬಲಾಗಿದೆ. ಇದು ಮಾನವೀಯತೆ ಹಾಗೂ ಮಹಿಳೆಯರ ಮೇಲಾದ ದೌರ್ಜನ್ಯ ’ ಎಂದರು.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಮಾತನಾಡಿ, ‘ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಲೇ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.