ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಡಿತ್ ಪುಟ್ಟರಾಜ ಗವಾಯಿಗೆ ಭಾರತರತ್ನ ನೀಡಲು ಒತ್ತಾಯ

Last Updated 26 ಜನವರಿ 2015, 20:26 IST
ಅಕ್ಷರ ಗಾತ್ರ

ಬೆಂಗಳೂರು: ಪಂಡಿತ್‌ ಪುಟ್ಟರಾಜ ಗವಾಯಿ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಹಿತ ವೇದಿಕೆ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನ­ದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ವೇದಿಕೆ ಅಧ್ಯಕ್ಷ ಎಚ್‌.ಎಸ್. ಸೋಂಪೂರ ಮಾತನಾಡಿ, ‘ಪುಟ್ಟರಾಜ ಗವಾಯಿ ಅವರು ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ. ಅವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಒತ್ತಾಯಿಸಿದರು.

ಗವಾಯಿ ಅವರು ಸಂಗೀತ ಮಾತ್ರವಲ್ಲದೇ ಸಾಹಿತ್ಯ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದಾರೆ. ಅವರು 30ಕ್ಕೂ ಕೃತಿಗಳನ್ನು ರಚಿಸಿದ್ದಾರೆ. ಸಾವಿರಾರು ಮಕ್ಕಳಿಗೆ ಸಂಗೀತವನ್ನು ಧಾರೆ ಎರೆದಿ­ದ್ದಾರೆ.  ಅವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಬೇಕು ಎಂದರು.

ರಾಜ್ಯದ  ಸಂಸದರು, ಸಚಿವರು ಸಹ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರ­ಬೇಕು. ವೇದಿಕೆ ವತಿಯಿಂದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ ಗವಾಯಿ ಅವರಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಪ್ರಧಾನ­ಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT