ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ: 10 ಮಂದಿ ಸಾವು

Last Updated 20 ಅಕ್ಟೋಬರ್ 2014, 12:34 IST
ಅಕ್ಷರ ಗಾತ್ರ

ಹೈದರಾಬಾದ್‌ (ಪಿಟಿಐ): ಆಂಧ್ರಪ್ರದೇಶದ ಪೂರ್ವಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿನ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 10 ಜನರು ಮೃತಪಟ್ಟಿದ್ದು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಇಲ್ಲಿನ ವಾಕಟಿಪ್ಪ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಇಲ್ಲಿ ಅಕ್ರಮವಾಗಿ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತು ಎನ್ನಲಾಗಿದೆ.

ಘಟನೆಯಲ್ಲಿ 10 ಜನರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಉಳಿದವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಇಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಖಾನೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT