ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟಾಕಿ ಮಳಿಗೆಗೆ ಅರ್ಜಿ

Last Updated 30 ಸೆಪ್ಟೆಂಬರ್ 2014, 19:45 IST
ಅಕ್ಷರ ಗಾತ್ರ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಬಿಬಿಎಂಪಿ ಮೈದಾನಗಳಲ್ಲಿ ಪಟಾಕಿ ಮಾರಾಟ ಮಳಿಗೆ ತೆರೆ­ಯಲು ಪೊಲೀಸ್‌ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ ಡಿಜಿಪಿ ಅಥವಾ ನಿರ್ದೇಶಕರ ಕಚೇರಿಗೆ ಸಂದಾಯವಾಗುವಂತೆ ₨2,000 ಮೊತ್ತದ ಡಿಮಾಂಡ್ ಡ್ರಾಫ್ಟ್ (ಡಿ.ಡಿ) ತೆಗೆಯಬೇಕು. ಜತೆಗೆ ನಗರ ಪೊಲೀಸ್ ಕಮಿಷನರ್ ಕಚೇರಿಗೆ ಸಂದಾಯವಾಗುವಂತೆಯೂ ₨ 1,000 ಮೊತ್ತದ ಡಿ.ಡಿ ತೆಗೆಯಬೇಕು ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.ಡಿ ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅ.6ರಿಂದ ಅ.10ರೊಳಗೆ ಮೈಸೂರು ರಸ್ತೆಯ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (ಸಿಎ­ಆರ್) ಕೇಂದ್ರ ವಿಭಾಗದ ಡಿಸಿಪಿ ಕಚೇರಿಗೆ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ನಗರ ಪೊಲೀಸ್ ಕಮಿಷನರ್ ಎಂ.ಎನ್‌.ರೆಡ್ಡಿ ತಿಳಿಸಿದ್ದಾರೆ.

ಅರ್ಜಿದಾರರು ಇತ್ತೀಚಿನ 2 ಭಾವಚಿತ್ರಗಳು, ಪಡಿತರ ಚೀಟಿಯ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಲಾಟರಿ ಮೂಲಕ ಅರ್ಜಿ­ದಾರರನ್ನು ಆಯ್ಕೆ ಮಾಡಲಾ­ಗು­ತ್ತದೆ. ಹೆಚ್ಚಿನ ಮಾಹಿತಿಗೆ ಸಿಎಆರ್‌ ಕೇಂದ್ರ ವಿಭಾಗದ ಕಚೇರಿ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT