ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟ್ಟಿಯಿಂದ ಅಮಾಯಕರು ಹೊರಕ್ಕೆ

ಸುದ್ದಿ 2 ನಿಮಿಷ
Last Updated 26 ಮಾರ್ಚ್ 2015, 19:36 IST
ಅಕ್ಷರ ಗಾತ್ರ

ಬೆಂಗಳೂರು: ಅಮಾಯಕರನ್ನು ರೌಡಿ ಪಟ್ಟಿಗೆ ಸೇರಿಸಿದ್ದರೆ ಅಂತಹವರ ಹೆಸರನ್ನು ಕೈಬಿಡಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್‌ ಗುರುವಾರ ವಿಧಾನಸಭೆಗೆ ತಿಳಿಸಿದರು.

ಜೆಡಿಎಸ್‌ನ ಜಮೀರ್‌ ಅಹಮದ್‌ ಮಾತನಾಡಿ, ತಮ್ಮ ಕ್ಷೇತ್ರ ವ್ಯಾಪ್ತಿಯ ಅಮಾಯಕರನ್ನು ರೌಡಿ ಪಟ್ಟಿಗೆ ಸೇರಿಸಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಗೃಹ ಸಚಿವರ ಗಮನಸೆಳೆದರು.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ 124 ಜನರನ್ನು ರೌಡಿ ಪಟ್ಟಿಗೆ ಸೇರಿಸಲಾಗಿದೆ. ಇವರಲ್ಲಿ ಅಮಾಯಕರು ಇದ್ದರೆ, ಅವರ ಹೆಸರನ್ನು ಕೈಬಿಡಲು ಪೊಲೀಸ್‌ ಕಮಿಷನರ್‌ಗೆ ಸೂಚಿಸಲಾಗುವುದು ಎಂದು ಸಚಿವ ಜಾರ್ಜ್‌ ತಿಳಿಸಿದರು.

ಕೆಲವರ ಮೇಲೆ ಅನುಮಾನ ಇದ್ದಾಗಲೂ ರೌಡಿ ಪಟ್ಟಿಗೆ ಸೇರಿಸಿ, ಅವರ ಚಲನವಲನಗಳ ಮೇಲೆ ನಿಗಾ ಇಡುವ ವ್ಯವಸ್ಥೆ ಇದೆ ಎಂಬ ಜಾರ್ಜ್‌ ಹೇಳಿಕೆಗೆ ಜಮೀರ್‌ ಆಕ್ರೋಶ ವ್ಯಕ್ತಪಡಿಸಿದರು. ‘ನಿಗಾ ಇಡುವುದಕ್ಕೇ ರೌಡಿ ಶೀಟ್‌ ತೆರೆದರೆ ನನ್ನ ಮೇಲೂ ಒಂದು ತೆರೆದು ಬಿಡಿ’ ಎಂದು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT