ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟ್ಟಿ ಪ್ರಕಟಿಸಿ

Last Updated 21 ಮೇ 2015, 19:30 IST
ಅಕ್ಷರ ಗಾತ್ರ

ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದಾಗ ‘ಕೆಲವು ಶಾಲೆಗಳು ಅನಧಿಕೃತ. ಅಂತಹ ಶಾಲೆಗಳ ವಿದ್ಯಾರ್ಥಿಗಳು ಬಾಹ್ಯ ವಿದ್ಯಾರ್ಥಿಗಳಾಗಿ ಪರೀಕ್ಷೆಗೆ ಕುಳಿತುಕೊಳ್ಳಬೇಕಾಗುತ್ತದೆ’ ಎಂದು ಸರ್ಕಾರ ಹುಕುಂ ಹೊರಡಿಸಿತ್ತು. ಇದು ಜನರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಕಡೆಗೆ ನಾಗರಿಕರ ಪ್ರತಿಭಟನೆಗೆ ಮಣಿದು, ಸರ್ಕಾರ ತನ್ನ ಫರ್ಮಾನನ್ನು ವಾಪಸ್‌ ತೆಗೆದುಕೊಂಡಿತು.

ಈ ವರ್ಷ ಬೇಬಿ ಸಿಟ್ಟಿಂಗ್‌ನಿಂದ ಮೊದಲ್ಗೊಂಡು ವಿವಿಧ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಇಂತಹ ಸಂಕ್ರಮಣ ಕಾಲದಲ್ಲಿ, ಸರ್ಕಾರ ಅಧಿಕೃತ ಶಾಲೆಗಳ ಪಟ್ಟಿಯನ್ನು ಮಾಧ್ಯಮಗಳಲ್ಲಿ ಪ್ರಕಟಿಸುವ ಮೂಲಕ ಸಾರ್ವಜನಿಕರ ಗಮನಕ್ಕೆ ತರಬೇಕು. ಆಗ, ಪಾಲಕರು ಅರಿಯದೆ ಅನಧಿಕೃತ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ನಂತರ ಪರದಾಡುವುದು ತಪ್ಪುತ್ತದೆ.
- ಉಡುಪಿ ಅನಂತೇಶ ರಾವ್,
ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT