ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿಯ ಮುಖಕ್ಕೇ ಆ್ಯಸಿಡ್ ಎರಚಿದ ಪತಿ

Last Updated 21 ಸೆಪ್ಟೆಂಬರ್ 2014, 20:01 IST
ಅಕ್ಷರ ಗಾತ್ರ

ಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯ ಮುಖಕ್ಕೆ ಆ್ಯಸಿಡ್ ಎರಚಿರುವ ಘಟನೆ ವರ್ತೂರು ಸಮೀಪದ ಗಾಂಧಿ ವೃತ್ತದಲ್ಲಿ ಶನಿವಾರ ನಡೆದಿದೆ. ಈ ಸಂಬಂಧ ಆರೋಪಿ ಫೈರೋಜ್ ಖಾನ್‌ (33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಉಲ್ಫತ್ ಬಾನು (27) ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಸಂಜೆ ದಂಪತಿ ನಡುವೆ ಜಗಳವಾಗಿದೆ. ಆಗ ಆರೋಪಿ, ಶೌಚಾಲಯ ಶುಚಿಗೊಳಿಸಲು ಬಳಸುವ ಆ್ಯಸಿಡ್‌ ಅನ್ನು ಪತ್ನಿಯ ಮುಖಕ್ಕೆ ಎರಚಿದ್ದಾನೆ. ಬಾನು ಅವರ ಚೀರಾಟ ಕೇಳಿದ ಸ್ಥಳೀಯರು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಮಿಳುನಾಡು ಮೂಲದ ಫೈರೋಜ್‌, 12 ವರ್ಷಗಳ ಹಿಂದೆ ಬಾನು ಅವರನ್ನು ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸೌದಿ ಅರೇಬಿಯಾದಲ್ಲಿ ಕಾರು ಚಾಲಕನಾಗಿದ್ದ ಆತ, ಮೂರು  ತಿಂಗಳ ಹಿಂದೆ ಮನೆಗೆ ಹಿಂದಿರುಗಿದ್ದ.  ಪತ್ನಿಯ ಶೀಲ ಶಂಕಿಸಿ ಪ್ರತಿದಿನ ಗಲಾಟೆ ಮಾಡುತ್ತಿದ್ದ ಆತ, ಶನಿವಾರ ಸಂಜೆ ಸಹ ಇದೇ ವಿಚಾರವಾಗಿ ಜಗಳ ಆರಂಭಿಸಿದ್ದ. ಆಗ ಮಧ್ಯಪ್ರವೇಶಿಸಿದ್ದ ಸ್ಥಳೀಯರು, ಸಂಧಾನಕ್ಕೆ ಯತ್ನಿಸಿದ್ದರು.

ಆದರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಆರೋಪಿ ಆ್ಯಸಿಡ್ ಎರಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾನು ಅವರ ಮುಖ ಹಾಗೂ ಕೈಗೆ ಸುಟ್ಟ ಗಾಯಗಳಾಗಿದೆ. ಘಟನೆ ಸಂಬಂಧ ಬಾನು ಅವರ ದೊಡ್ಡಪ್ಪ ಅಬ್ದುಲ್ ಖಾದರ್‌ ಅವರು ದೂರು ಕೊಟ್ಟಿದ್ದಾರೆ. ದೂರಿನ ಅನ್ವಯ ಹಲ್ಲೆ (ಐಪಿಸಿ 326) ಹಾಗೂ ಕೊಲೆ ಯತ್ನ (ಐಪಿಸಿ 307) ಆರೋಪದಡಿ ಫೈರೋಜ್‌ನನ್ನು ಬಂಧಿಸಲಾಗಿದೆ ಎಂದು ವರ್ತೂರು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT