ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಲಿಮಾರಿಗೆ ಸರ್ಕಾರಿ ವಸತಿ ಶಾಲೆ: ಚಿಂತನೆ

Last Updated 23 ಆಗಸ್ಟ್ 2014, 11:19 IST
ಅಕ್ಷರ ಗಾತ್ರ

ಪಲಿಮಾರು (ಪಡುಬಿದ್ರಿ): ಕಾಪು ಕ್ಷೇತ್ರದ ಪಲಿಮಾರು ಗ್ರಾಮದಲ್ಲಿ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.

ಪಲಿಮಾರು ಪದವಿ ಪೂರ್ವಕಾಲೇಜಿನಲ್ಲಿ ₨ 3.61 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಅಕ್ಷರ ದಾಸೋಹ ಕಟ್ಟಡ ಉದ್ಘಾಟನೆ ಮತ್ತು ಪ್ರತಿಭಾವಂತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ರಾಜ್ಯ ಸರ್ಕಾರವು ರಾಜ್ಯದಾದ್ಯಂತ 100 ವಸತಿ ಶಾಲೆ ಮತ್ತು 100 ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಮುಂದಾಗಿದೆ ಎಂದು ತಿಳಿಸಿದರು.

ಕಳೆದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉಡುಪಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಶಾಲೆಯ ವಿದ್ಯಾರ್ಥಿನಿ ದೀಕ್ಷಾ, ತೇಜಶ್ರೀ, ನಿಶ್ಮಿತಾ ಶೆಟ್ಟಿಯವರನ್ನು ಸಚಿವರು ಸನ್ಮಾನಿಸಿದರು.

ಪಲಿಮಾರು ಗ್ರಾ.ಪಂ ಅಧ್ಯಕ್ಷೆ ಮಾಲತಿ ದಿವಾಕರ್ ಅಧ್ಯಕ್ಷತೆ ವಹಿಸಿದ್ಚದರು. ಉಪಾಧ್ಯಕ್ಷ ಗಿರಿಯಪ್ಪ ಪೂಜಾರಿ, ಕ್ಷೇತ್ರ ಶಿಕ್ಷಣಾಕಾರಿ ರವಿಶಂಕರ ರಾವ್, ತಾಪಂ ಸದಸ್ಯೆ ಅಮಿತಾ ಪೂಜಾರಿ, ದಾನಿ ಫ್ರಾನ್ಸಿಸ್ ಡಿಸೋಜ, ಗ್ರಾ.ಪಂ ಪೂರ್ವಾಧ್ಯಕ್ಷ ನವೀನ್‍ಚಂದ್ರ ಸುವರ್ಣ, ಸದಸ್ಯರಾದ ಪುಷ್ಪಲತಾ ಮತ್ತು ಗಣೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅನ್ಬರಸನ್ ಡಿ. ಮುಖ್ಯ, ಪ್ರೌಢಶಾಲಾ ಮುಖ್ಯಸ್ಥೆ ಆಶಾ ಕೆ, ಕಲ್ಲೇಶ್ ಕೆ. ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT